ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಶ್ರೀ ತೇರು ಮಲ್ಲೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ದಸರಾ ಅನುಷ್ಠಾನೋತ್ಸವ–2026ರ ಅಂಗವಾಗಿ ಅಕ್ಟೋಬರ್ 20ರಿಂದ 22ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಹಾಗೂ ಮುಜರಾಯಿ ಅಧಿಕಾರಿ ಸಿದ್ದೇಶ್ ತಿಳಿಸಿದ್ದಾರೆ.
ಅಕ್ಟೋಬರ್ 20ರ ಮಂಗಳವಾರ ಬೆಳಿಗ್ಗೆ 6ರಿಂದ 9 ಗಂಟೆಯವರೆಗೆ ಶ್ರೀ ತೇರು ಮಲ್ಲೇಶ್ವರಸ್ವಾಮಿ ಹಾಗೂ ಇತರ ದೇವರುಗಳ ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.
ಅಕ್ಟೋಬರ್ 21ರ ಬುಧವಾರ ಮಧ್ಯಾಹ್ನ 3 ಗಂಟೆಯಿಂದ ದೇವರ ಉತ್ಸವ ಮೂರ್ತಿಗಳನ್ನು ನಗರದ ಪ್ರಮುಖ ದೇವರುಗಳೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಗುತ್ತದೆ. ಸಂಜೆ 4 ಗಂಟೆಗೆ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದ್ದು, ಸಂಪ್ರದಾಯಬದ್ಧವಾಗಿ ದಸರಾ ಆಚರಣೆ ನೆರವೇರಲಿದೆ.
ಅಕ್ಟೋಬರ್ 22ರ ಗುರುವಾರ ಮಧ್ಯಾಹ್ನ 3 ಗಂಟೆಯಿಂದ ಶ್ರೀ ತೇರು ಮಲ್ಲೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಪವಾಡ ಮಹೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ದಸರಾ ಉತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಲಂಕಾರ ಹಾಗೂ ಪ್ರಸಾದ ಸೇವೆಗಳನ್ನು ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಹಶೀಲ್ದಾರ್ ಹಾಗೂ ಮುಜರಾಯಿ ಅಧಿಕಾರಿ ಸಿದ್ದೇಶ್ ಮನವಿ ಮಾಡಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.