ಜವಳಿ ಒತ್ತಾಯ ನಾಯಕನಹಟ್ಟಿ::ಡಿ.9.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಹಾಗೂ ಜನಪರ ಶಾಸಕರಾದಂತಹ ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಮಂಜು ಜವಳಿಯವರು ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಹಾಗೂ ಕೆಪಿಸಿಸಿ ಅಧ್ಯಕ್ಷರು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರಿಗೆ ಒತ್ತಾಯಿಸಿದ್ದಾರೆ.
ಶಾಸಕ ಎನ್ ವೈ ಗೋಪಾಲಕೃಷ್ಣರವರಿಗೆ ಸಿದ್ದರಾಮಯ್ಯ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಿದರೆ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಹೊತ್ತು ನೀಡಿದಂತೆ ಆಗುತ್ತದೆ ಎಂದು ಮಂಜು ಜವಳಿಯವರು ಪತ್ರಿಕಾ ಮಾಧ್ಯಮದವರಿಗೆ ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಹಾಗೂ ಬಳ್ಳಾರಿ ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಪಾತ್ರದಲ್ಲಿ ಎನ್ ವೈ ಗೋಪಾಲಕೃಷ್ಣರವರ ಪಕ್ಷದ ಸಂಘಟಿತ ಶಕ್ತಿ ಹಾಗೂ ಅಭಿವೃದ್ಧಿಯ ಪಥ ಇರುತ್ತದೆ.
ವಾಲ್ಮೀಕಿ ಸಮುದಾಯದಲ್ಲಿ 15 ಮೀಸಲಾತಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ 14 ಶಾಸಕರು ಆಯ್ಕೆಯಾಗಿ ಬಂದಿರುತ್ತಾರೆ, ಹಾಗೂ ಎರಡು ಪರಿಶಿಷ್ಟ ಪಂಗಡದ ಮೀಸಲಾತಿಯಲ್ಲಿ ಎರಡು ಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಸಂಸದರು ಆಯ್ಕೆಯಾಗಿ ಬಂದಿರುತ್ತಾರೆ, ಮತ್ತು ಸಾಮಾನ್ಯ ಕ್ಷೇತ್ರದಲ್ಲಿ ಒಬ್ಬರು ಕುಮಾರಿ ಪ್ರಿಯಾಂಕಾ ಜಾರಕಿಹೊಳಿಯವರು ವಾಲ್ಮೀಕಿ ಸಮುದಾಯದಿಂದ ಲೋಕಸಭಾ ಚುನಾವಣೆಯಲ್ಲಿ ಜಯಶೀಲರಾಗಿ ಬಂದಿರುತ್ತಾರೆ.
ಏಳು ಬಾರಿ ಶಾಸಕರಾಗಿ, ಉಪ ಸಭಾಪತಿಗಳಾಗಿ, ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ನಿಗಮದ ಅಧ್ಯಕ್ಷರಾಗಿ,ವಾಲ್ಮೀಕಿ ಜನಾಂಗದ ಅತ್ಯಂತ ಹಿರಿಯ ರಾಜಕಾರಣಿಯಾಗಿರುವ ಎನ್ ವೈ ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡಿದರೆ ಚಿತ್ರದುರ್ಗ,ಬಳ್ಳಾರಿ, ದಾವಣಗೆರೆ, ಹಾಗೂ ಇನ್ನಿತರ ಪರಿಶಿಷ್ಟ ಪಂಗಡದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತದೆ ಎಂದು ಸಾಮಾಜಿಕ ಜಾಲತಾಣದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಮಂಜುಜವಳಿ ಅವರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಪತ್ರಿಕಾ ಮಾಧ್ಯಮ ಮುಖಾಂತರ ತಿಳಿಸಿದರು.
About The Author
Discover more from JANADHWANI NEWS
Subscribe to get the latest posts sent to your email.