ವರದಿ: ಕೆ.ಟಿ.ಮೋಹನ್ ಕುಮಾರ್
ಕೆ.ಆರ್.ನಗರ (ಮೈಸೂರು ಜಿಲ್ಲೆ): ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು ಶ್ರೀ ಭಗೀರಥ ಉಪ್ಪಾರ ಸಂಘದ ವತಿಯಿಂದ ಜ. 12ರ ಭಾನುವಾರ ಬೆಳಿಗ್ಗೆ 11ಗಂಟೆಗೆ ಪಟ್ಟಣದ ಉಪ್ಪಾರರ ಶ್ರೀರಾಮ ಮಂದಿರದಲ್ಲಿ ಸಂಘವು ಹೊರತಂದಿರುವ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ, ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ನೌಕರರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಡಿ.ರವಿಶಂಕರ್ ನೆರವೇರಿಸುವರು, ಕ್ಯಾಲೆಂಡರ್ ಬಿಡುಗಡೆಯನ್ನು ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಬಿಡುಗಡೆ ಮಾಡುವರು, ವಿಧಾನ ಪರಿಷತ್ ಸದಸ್ಯ ಅಡಗೂರು
ಎಚ್.ವಿಶ್ವನಾಥ್ ಜ್ಯೋತಿ ಬೆಳಗಿಸುವರು, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಮಾಜಿ ಸಚಿವ ಸಾ.ರಾ.ಮಹೇಶ್ ನೀಡುವರು.
ಮುಖ್ಯ ಅತಿಥಿಗಳಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ಎನ್.ವಿಜಯ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಟಿ.ಮಂಜಪ್ಪ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ವೆಂಕೋಬ, ಅರಕಲಗೂಡು ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಹೊಯ್ಸಳ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ
ಟಿ.ರಾಮೇಗೌಡ, ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಯೋಗೀಶ್ ಉಪ್ಪಾರ್, ತಾಲೂಕು ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಎಚ್.ಟಿ.ಪಾಂಡು ಭಾಗವಹಿಸಲಿದ್ದು
ಸಮಾರಂಭದಲ್ಲಿ ಪ್ರಸೂತಿ ತಜ್ಞ ವೈದ್ಯೆ ಡಾ.ದಿವ್ಯತಾ, ಭಗೀರಥ ಸಮಾಜ ಸೇವಾ ರತ್ನ ಪ್ರಶಸ್ತಿ ಪುರಸ್ಕೃತರು ಹಾಗೂ ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್, ಸಬ್ ಇನ್ಸ್ಪೆಕ್ಟರ್
ಕೆ.ವಿ.ರಾಜೇಶ್, ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ
ಟಿ.ಆರ್.ಮಂಜುನಾಥ್, ಹಿರಿಯ ಪತ್ರಕರ್ತ ಕೆ.ಟಿ.ಮಂಜುನಾಥ್, ನಿವೃತ್ತ ಇಂಜಿನಿಯರ್
ಟಿ.ಎನ್.ಶ್ರೀಧರ್, ಪೊಲೀಸ್ ಇಲಾಖೆಯ ರಮೇಶ್, ಶಿವಪ್ಪ, ಗುರುಪ್ರಸಾದ್, ಭರತ್ ಕುಮಾರ್, ಬಿ.ಆರ್.ರವಿಕುಮಾರ್, ನಿವೃತ್ತ ಶಿಕ್ಷಕ ಕೃಷ್ಣ, ಗುತ್ತಿಗೆದಾರ
ಕೆ.ಟಿ.ನಿಂಗರಾಜು ಹಾಗೂ ನಳಿನಿ ಅವರುಗಳನ್ನು ಸನ್ಮಾನಿಸಲಾಗುವುದು. ಉಪ್ಪಾರ ಸಮುದಾಯದ ಕಾರ್ಯಕ್ರಮದಲ್ಲಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಮಾಡಬೇಕೆಂದು ಸಂಘದ ಅಧ್ಯಕ್ಷ ಕಾಟ್ನಾಳು ಮಹದೇವ ಮನವಿ ಮಾಡಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.