ಪರಶುರಾಂಪುರ ಫೆ.10
ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ತಾಲೂಕು ಕೇಂದ್ರಗಳನ್ನು ರಚಿಸುವಾಗ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯೂ ಸೇರಿರುತ್ತದೆ. ಈಗಾಗಲೇ ಅಧಿವೇಶನದಲ್ಲಿ ಈ ಬಗ್ಗೆ ನಾನು ವಿವರಿಸಿ ಮಾತನಾಡಿದ್ದೇನೆ ಪರಶುರಾಂಪುರ ತಾಲೂಕನ್ನು ಮಾಡುವುದು ನನ್ನ ಸಂಕಲ್ಪ ಎಂದು ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ಹೇಳಿದರು.
ಪರಶುರಾಂಪುರ ಹೋಬಳಿ ಕೇಂದ್ರವನ್ನು ತಾಲೂಕು ಕೇಂದ್ರವನ್ನಾಗಿ ಮಾಡಲು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ರೈತರ ಬೃಹತ್ ಸಮಾವೇಶದಲ್ಲಿ ಚಳ್ಳಕೆರೆ ಮಾತನಾಡಿ, ನಾನು ಮೂರು ಬಾರಿ ಶಾಸಕರಾಗುವಂತೆ ಮಾಡಲು ನೀವು ಶ್ರಮ ಪಟ್ಟಿದ್ದಿರಾ. ತಾಲೂಕು ಕೇಂದ್ರವಾಗಲು ಎಲ್ಲಾ ಅರ್ಹತೆಗಳು ಇವೆ ಹಾಗಾಗಿ ನಿಮ್ಮ ಹೋರಾಟಕ್ಕೆ ಶಕ್ತಿ ತುಂಬುತ್ತೇನೆ. ತಾಲೂಕು ಕೇಂದ್ರ ಮಾಡುವುದು ಮೊದಲ ಆಧ್ಯತೆ ಎಂದರು.




ರೈತ ಮುಖಂಡರಾದ ಸೋಮಗುದ್ದು ರಂಗಸ್ವಾಮಿ ಮಾತನಾಡಿ, ತಾಲೂಕು ಕೇಂದ್ರ ಮಾಡುವುದು ನಮ್ಮ ದಶಕಗಳ ಹೋರಾಟವಾಗಿದ್ದು, ನಮ್ಮ ಹೋರಾಟದಲ್ಲಿ ರಾಜಿ ಇಲ್ಲ. ಎಲ್ಲಾ ರೈತ ಸಂಘಟನೆಗಳು ಒಂದಾಗಿದ್ದು ಇಂದು ಅಖಂಡವಾಗಿದ್ದೇವೆ. ಶಾಸಕರು ಹೆಚ್ಚು ಜವಾಬ್ದಾರಿ ಹೊತ್ತಿದ್ದು ನಮ್ಮ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದಾರೆ. ನಮ್ಮ ಕಷ್ಟಗಳನ್ನು ಸರ್ಕಾರ ಹರಿಸಬೇಕು ಎಂದರು.
ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ನಾಗರಾಜ್ ಮಾತನಾಡಿ, ರೈತರೊಂದಿಗೆ ಇಡೀ ಹೋಬಳಿಯ ಎಲ್ಲಾ ಸಂಘಟನೆಗಳು ಜೊತೆಯಾಗಿವೆ. ನಾವು ಅಭಿವೃದ್ಧಿ ಯಾಗಲು ತಾಲೂಕು ಆಗಬೇಕು ಮತ್ತು ತಾಲೂಕು ಸೌಕರ್ಯಗಳನ್ನು ತರಬೇಕು.ಇದಕ್ಕಾಗಿ ನಿರಂತರವಾಗಿ ಹೋರಾಟವ ಮಾಡುತ್ತೇವೆ ಎಂದರು.
ವೇದಿಕೆಯಲ್ಲಿ ವಕೀಲರು ಮತ್ತು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್, ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ನಾಗರಾಜ್, ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಮಹಂತೇಶ್, ಪುಟ್ಟಲಿಂಗಪ್ಪ ಮತ್ತು ಅನೇಕ ಮುಖಂಡರು ಉಪಸ್ಥಿತರಿದ್ದರು.
ಶೀಘ್ರದಲ್ಲೇ ಸಚಿವರಿಗೆ ಮನವಿ..;
ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್ ಮಾತನಾಡಿ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ “ಪರಶುರಾಂಪುರ ಹೋಬಳಿ” ಕೇಂದ್ರವು ಹೊಸ ತಾಲ್ಲೂಕಾಗಲೇ ಬೇಕಾಗಿದೆ. ಇಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಬೃಹತ್ ಚಳುವಳಿಗೆ ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಬೆಂಬಲ ನೀಡಿದ್ದು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲು, ಈ ಭಾಗದ ವಿದ್ಯಾರ್ಥಿಗಳ ಬದುಕು ಹಸನಾಗಲು ಪರಶುರಾಂಪುರ ತಾಲೂಕು ಆಗಲೇಬೇಕು. ಜಿಲ್ಲಾ ಕೇಂದ್ರದಲ್ಲಿ ಈ ಬಗ್ಗೆ ವಿದ್ಯಾರ್ಥಿಗಳ ನೇತೃತ್ವದಲ್ಲಿ ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಹೋಬಳಿ ಕೇಂದ್ರವನ್ನು ತಾಲೂಕು ಕೇಂದ್ರವನ್ನಾಗಿ ಮಾಡಲು ಹಮ್ಮಿಕೊಂಡಿದ್ದ ರೈತರ ಬೃಹತ್ ಸಮಾವೇಶದಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ರೈತ ಮುಖಂಡರಾದ ಸೋಮಗುದ್ದು ರಂಗಸ್ವಾಮಿ, ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್, ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ನಾಗರಾಜ್, ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಮಹಂತೇಶ್, ಪುಟ್ಟಲಿಂಗಪ್ಪ ಮತ್ತು ಅನೇಕ ಮುಖಂಡರು ಭಾಗವಹಿಸಿದ್ದರು.


About The Author
Discover more from JANADHWANI NEWS
Subscribe to get the latest posts sent to your email.