ಚಿತ್ರದುರ್ಗ ಫೆ.10:
ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇದೇ ಫೆ.11ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 1.30ಕ್ಕೆ ಚಳ್ಳಕೆರೆಗೆ ಆಗಮಿಸುವರು. ಮಧ್ಯಾಹ್ನ 2.30ಕ್ಕೆ ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮಕ್ಕೆ ಭೇಟಿ ನೀಡಿ, ಜಲಾನಯನ ಅಭಿವೃದ್ಧಿ ಇಲಾಖೆಯ RAD-RAFTAR ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು. ಸಂಜೆ 4ಕ್ಕೆ ರೇಣುಕಾಪುರದಿಂದ ಹೊರಟು ಸಂಜೆ 5ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಸಂಜೆ 5.30ಕ್ಕೆ ಚಿತ್ರದುರ್ಗದಿಂದ ಹೊರಟು ಸಂಜೆ 6ಕ್ಕೆ ಭರಮಸಾಗರಕ್ಕೆ ಆಗಮಿಸಿ, ಸಂಜೆ 6.30ಕ್ಕೆ ತರಳಬಾಳು ಹುಣ್ಣಿಮೆ ಮಹೋತ್ಸವ-2025 ಅಂಗವಾಗಿ ಏರ್ಪಡಿಸಲಾಗಿರುವ “ಕೃಷಿ ಮತ್ತು ಜಲಸಂರಕ್ಷಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 7.30ಕ್ಕೆ ಭರಮಸಾಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್ ತಿಳಿಸಿದ್ದಾರೆ.

