ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಪಿ ಎಲ್ ಡಿ ಬ್ಯಾಂಕ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಪಟ್ಟಣದ
ಎಸ್.ಎಂ.ಸೋಮಣ್ಣ ಅವರನ್ನು ಪಟ್ಟಣದ ಗಾಂಧಿ ಚೌಕದಲ್ಲಿ ಜೆಡಿಎಸ್ ಪಕ್ಷದ ಮುಖಂಡರುಗಳು, ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಿಸಿ ಅಭಿನಂದಿಸಿದರು.
ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಎಸ್.ಎಂ.ಸೋಮಣ್ಣ ಅವರು ನನ್ನನ್ನು ಪಿಎಲ್‌ಡಿ ಬ್ಯಾಂಕ್ ಗೆ ಮೂರು ಬಾರಿ ಆಯ್ಕೆ ಮಾಡಿದ ಸರ್ವ ಮತದಾರರಿಗೆ, ನನ್ನ ಗೆಲುವಿಗೆ ಶ್ರಮಿಸಿದ ಜೆಡಿಎಸ್ ಪಕ್ಷದ ಮುಖಂಡರುಗಳು, ಕಾರ್ಯಕರ್ತರುಗಳು, ರೈತ ಸದಸ್ಯರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನಮ್ಮ ಅಧಿಕಾರದ ಅವಧಿಯಲ್ಲಿ ರೈತಪರವಾದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.


ಈ ಸಂದರ್ಭದಲ್ಲಿ ಅಪೇಕ್ಸ್ ಬ್ಯಾಂಕ್ ಮಾಜಿ ನಿರ್ದೇಶಕ
ಎಸ್.ಕೆ.ಮಧುಚಂದ್ರ, ಜೆಡಿಎಸ್ ತಾಲೂಕು ಅಧ್ಯಕ್ಷ ಮೆಡಿಕಲ್ ರಾಜಣ್ಣ, ಮುಖಂಡರುಗಳಾದ ಶಿವಣ್ಣ, ಪಾಪಣ್ಣ, ಶ್ರೀನಿವಾಸ, ಮೈಕಲ್, ಜಯಣ್ಣ, ಬಸ್ ಕುಮಾರ್, ನರಸಿಂಹೇಗೌಡ, ಚಿಕ್ಕೇಗೌಡ, ಮಹೇಶ್, ಸೋಮು ಸೇರಿದಂತೆ ಹಲವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.