ನಾಯಕನಹಟ್ಟಿ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಜೆ ಆರ್ ರವಿಕುಮಾರ್ ಹಾಗೂ ಉಪಾಧ್ಯಕ್ಷ ಕೃಷ್ಣಪ್ಪನವರು ನಿರ್ದೇಶಕರಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.
ನಂತರ ನೂತನ ಅಧ್ಯಕ್ಷ ಜಿ ಆರ್ ರವಿಕುಮಾರ್ ಮಾತನಾಡಿ ಸರ್ವಾನು ಮತದಿಂದ ಸದಸ್ಯರುಗಳನ್ನು ಆಯ್ಕೆ ಮಾಡಲಾಗಿದೆ. ಸದಸ್ಯರುಗಳು ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ರೈತರಿಗೆ ಅನುಕೂಲವಾಗಬೇಕು ಎನ್ನುವುದೇ ನಮ್ಮ ಮೊದಲ ಉದ್ದೇಶ. ಪಾರದರ್ಶಕವಾಗಿ ಕೆಲಸವಾಗಬೇಕು, ನಿಮ್ಮೆಲ್ಲರ ಸಹಕಾರ, ಮಾರ್ಗದರ್ಶನ ಅವಶ್ಯಕ. ನೀವುಗಳು ನಮ್ಮ ಮೇಲೆ ನೀಡಿರುವ ಜವಾಬ್ದಾರಿಯನ್ನು ಪಾರದರ್ಶಕವಾಗಿ ನಿಭಾಯಿಸಲಾಗುವುದು ಎಂದು ಹೇಳಿದರು.


ನಂತರ ಪಟೇಲ್ ಜಿಎಂ ತಿಪ್ಪೇಸ್ವಾಮಿ ಮಾತನಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಸಂದರ್ಭದಲ್ಲಿ ಜಿದ್ದಾಜಿದ್ದಿನ ಸಂಘರ್ಷಗಳಿಗೆ ಅವಕಾಶ ನೀಡದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವಿರೋಧವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಎಲ್ಲರೂ ಪಕ್ಷಾತೀತವಾಗಿ ಕೈಜೋಡಿಸಿದಾಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ. ಅವಿರೋಧವಾಗಿ ಆಯ್ಕೆ ಮಾಡುವುದರಿಂದ ಸುಸೂತ್ರವಾಗಿ ಸೊಸೈಟಿ ಕಾರ್ಯನಿರ್ವಹಿಸುವುದರ ಜೊತೆಗೆ ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದರು.
ನಂತರ ಎಂ ವೈ ಟಿ ಸ್ವಾಮಿ ಮಾತನಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 30 ವರ್ಷಗಳಿಂದ ಚುನಾವಣೆ ನಡೆದಿಲ್ಲ. ಎಲ್ಲವೂ ಅವಿರೋಧವಾಗಿ ಆಯ್ಕೆ ಮಾಡಲಾಗುತ್ತಿದೆ. ಅಧ್ಯಕ್ಷ ಸ್ಥಾನಕ್ಕೆ ಹಲವರು ಆಕಾಂಕ್ಷಿಗಳು ಸ್ಪರ್ಧಿಸುವುದು ಸಹಜ ಅದರಲ್ಲಿ ಉತ್ತಮ ಅಧಿಕಾರ ನಡೆಸುವ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಲ್ಲಿಯೇ ಒಂದು ಮಾದರಿ ಕೃಷಿ ಪತ್ತಿನ ಸಹಕಾರ ಸಂಘವಾಗಿ ದಾಖಲೆ ನಿರ್ಮಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರುಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ ಎಂ ಶಿವಸ್ವಾಮಿ, ಶ್ರೀಕಾಂತ್, ಓಬಳೇಶ್, ಗೋಪಿ, ರಮೇಶ್, ಜೆ ಟಿ ತಿಪ್ಪೇಸ್ವಾಮಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಆರ್ ಟಿ ತಿಪ್ಪೇಸ್ವಾಮಿ, ಧನಂಜಯ್, ಬೋರಣ್ಣ ಇನ್ನು ಮುಂತಾದವರು ಹಾಜರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.