February 10, 2026
IMG-20260210-WA0033.jpg

ಚಿತ್ರದುರ್ಗ: ತಾಲ್ಲೂಕಿನ ಬೆಳಗಟ್ಟ ಗ್ರಾಮದಲ್ಲಿರುವ ಶ್ರೀಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿ ಮಠದಲ್ಲಿ ಪವಾಡಪುರುಷ ಶ್ರೀಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿಯ 25ನೇ ವರ್ಷದ ಮಹಾರಥೋತ್ಸವ ಫೆಬ್ರವರಿ 19ರಂದು ಬೆಳಿಗ್ಗೆ 10.30 ಗಂಟೆಗೆ ಭಕ್ತಿಭಾವದಿಂದ ಜರುಗಲಿದೆ.

ಮಹಾರಥೋತ್ಸವದ ನಂತರ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಜ್ಞಾನ ದಾಸೋಹ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಕಳೆದ ಸುಮಾರು ನಾಲ್ಕು ದಶಕಗಳಿಂದ ಮಠದಲ್ಲಿ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಸೇವೆಗಳು ನಿರಂತರವಾಗಿ ನಡೆಯುತ್ತಿದ್ದು, ಪ್ರತಿ ಸೋಮವಾರ, ಗುರುವಾರ, ಅಮಾವಾಸ್ಯೆ ಮತ್ತು ಹುಣ್ಣಿಮೆ ದಿನಗಳಲ್ಲಿ ತ್ರಿವಿಧ ದಾಸೋಹ ಕಾರ್ಯಕ್ರಮಗಳು ನಡೆಯುತ್ತಿವೆ.
ಕಾರ್ಯಕ್ರಮದಲ್ಲಿ ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಚಿತ್ರದುರ್ಗ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶಿವಲಿಂಗಾನಂದ ಮಹಾಸ್ವಾಮಿಗಳು, ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಪ್ರಸನ್ನಾನಂದ ಸ್ವಾಮಿಗಳು ಹಾಗೂ ಆಂಧ್ರಪ್ರದೇಶದ ಉರವಕೊಂಡದ ಕರಿಬಸವರಾಜೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಪ್ರವಚನ ನೀಡಲಿದ್ದಾರೆ.
ಶ್ರೀಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಅಮ್ಮ ಮಹದೇವಮ್ಮ ಅವರು ಅಧ್ಯಕ್ಷತೆ ವಹಿಸಲಿದ್ದು, ಸಂಸದರಾದ ಗೋವಿಂದ ಎಂ. ಕಾರಜೋಳ, ಶಾಸಕರಾದ ಟಿ. ರಘುಮೂರ್ತಿ, ಕೆ.ಸಿ. ವೀರೇಂದ್ರ (ಪಪ್ಪಿ) ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಎಂ. ಚಂದ್ರಪ್ಪ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೇರಿದಂತೆ ಎನ್. ತಿಪ್ಪೇಸ್ವಾಮಿ, ಕೆ.ಸಿ. ನಾಗರಾಜ್, ಅನಿತ್ ಕುಮಾರ್, ಬಿ.ಟಿ. ಸಿದ್ದೇಶ್, ಬಿ. ತಿಮ್ಮಪ್ಪ, ಚಂದ್ರಶೇಖರ್, ಯುಗಧರ್ಮ ರಾಮಣ್ಣ, ಡಾ. ನಾಗೇಂದ್ರ ಆಚಾರ್ಯ, ಶಶಿಧರಗುಪ್ತ, ಪಾಪೇಶ ನಾಯಕ, ವಿ.ಎಲ್. ಪ್ರಶಾಂತ್, ಅರುಣಾಚಲಮೂರ್ತಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅರ್ಚಕರಾದ ಟಿ. ನಾಗೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading