February 10, 2026
IMG-20260210-WA0012.jpg

ಚಳ್ಳಕೆರೆ ತಾಲ್ಲೂಕಿನ ಬೇಡರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಜಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿದ ಆಟದ ಮೈದಾನದ ಉದ್ಘಾಟನಾ ಸಮಾರಂಭವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಯುತ ಅರುಣ್ ಕುಮಾರ್ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ರೆಡ್ಡಿ, ಬೇಡರಹಳ್ಳಿ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು, ಎಸ್‌ಡಿಎಂಸಿ ಸದಸ್ಯರು ಹಾಗೂ ಊರಿನ ಹಿರಿಯ ಮುಖಂಡರೊಂದಿಗೆ ಸೇರಿ ಆಟದ ಮೈದಾನವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ವೇದ ಮತ್ತು ಸಂಗಾಡಿಗ ಅವರಿಂದ ಪ್ರಾರ್ಥನೆ ನೆರವೇರಿತು. ಮಂಜುನಾಥ್ ಜೆ ಅವರು ನಿರೂಪಣೆ ವಹಿಸಿದ್ದರು. ಸ್ವಾಗತ ಭಾಷಣವನ್ನು ಶಾಲೆಯ ಪ್ರಭಾವಿ ಮುಖ್ಯ ಶಿಕ್ಷಕರಾದ ಗೋವಿಂದರಾಜು ಅವರು ಮಾಡಿದರು.
ಅತಿಥಿ ಭಾಷಣದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ರೆಡ್ಡಿ, ಗ್ರಾಮೀಣ ಶಾಲೆಗಳಲ್ಲಿ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಆಟದ ಮೈದಾನಗಳು ಅತ್ಯಂತ ಅವಶ್ಯಕವಾಗಿದ್ದು, ಇಂತಹ ಸೌಲಭ್ಯಗಳು ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರುಣ್ ಕುಮಾರ್, ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಸದಾ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮೂಲಸೌಕರ್ಯ ಒದಗಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶಿವಕುಮಾರ್, ಭೂಷಣ, ಅಜ್ಜಣ್ಣನವರು, ಡಿಕ್ಯಾತಪ್ಪನವರು, ಬಿ.ಆರ್. ತಿಮ್ಮಾರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ಉಮೇಶ್, ಶ್ರೀಮತಿ ಪದ್ಮ, ಕುಮಾರಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷರಾದ ಸಂತೋಷ್, ಉಪಾಧ್ಯಕ್ಷರಾದ ಶ್ರೀಮತಿ ಕಲ್ಪನಾ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಶಾಲೆಯ ಶಿಕ್ಷಕರಾದ ತಿಪ್ಪೇಸ್ವಾಮಿ, ಮಂಜುನಾಥ್ ಜೆ, ಮಂಜುನಾಥ್ ಎಲ್, ವೀರೇಶ ವಿ (ಅತಿಥಿ ಶಿಕ್ಷಕರು) ಹಾಗೂ ಊರಿನ ಎಲ್ಲಾ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading