April 10, 2026
IMG-20260410-WA0128.jpg

ನಾಯಕನಹಟ್ಟಿ, ಏ.10: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕಡು ಬಡತನದಲ್ಲೂ ಅಪಾರ ಪ್ರತಿಭೆ ತೋರಿದ ವಿದ್ಯಾರ್ಥಿಯೊಬ್ಬರ ಸಾಧನೆ ಗಮನ ಸೆಳೆದಿದೆ.
ತಾಲೂಕಿನ ನಾಯಕನಹಟ್ಟಿ ಹೋಬಳಿಯ ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಖಲಗೇರೆ ಗ್ರಾಮದ ಆರ್.ಪಿ. ಹರೀಶ್ ಅವರು ಪಟ್ಟಣದ ಎಸ್‌ಟಿಎಸ್‌ಆರ್ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ರಲ್ಲಿ 422 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ.
ಸಾಮಾನ್ಯ ಕುಟುಂಬ ಹಿನ್ನೆಲೆಯಲ್ಲಿಯೇ ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪದ ಮೂಲಕ ಈ ಸಾಧನೆ ಮಾಡಿದ ಹರೀಶ್ ಅವರ ಯಶಸ್ಸು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ.
ವಿದ್ಯಾರ್ಥಿಯ ಸಾಧನೆಗೆ ಎಸ್‌ಟಿಎಸ್‌ಆರ್ ಪಿಯು ಕಾಲೇಜಿನ ಪ್ರಾಂಶುಪಾಲರು, ತಂದೆ ಆರ್. ಪ್ರಕಾಶ್, ತಾಯಿ ಪಾರ್ವತಮ್ಮ, ಸಂಬಂಧಿಕರು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading