March 17, 2026
1754847641871.jpg

ಹಿರಿಯೂರು ತಾಲೂಕು:
ಮಾವಿನಮಡು ಗ್ರಾಮದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಸ್ ಸೌಲಭ್ಯವಿಲ್ಲದೆ ದಿನನಿತ್ಯ ತೊಂದರೆ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಕರ್ನಾಟಕ ಸರ್ಕಾರದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ತಕ್ಷಣ, ಸಚಿವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀ ವೆಂಕಟೇಶ್ ಅವರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ಅವರ ತ್ವರಿತ ಕ್ರಮದಿಂದ ಇಂದು ಬೆಳಿಗ್ಗೆ 8 ಗಂಟೆಗೆ ಬಸ್ ಸೇವೆ ಮಾವಿನಮಡು ಗ್ರಾಮಕ್ಕೆ ಪ್ರಾರಂಭವಾಯಿತು.

ಈ ಸಂದರ್ಭದಲ್ಲಿ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ ಸಂತೋಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಾವಿನಮಡು ಮುಖಂಡರಾದ ದ್ಯೆಮೇಗೌಡ, ಕಾಂಗ್ರೆಸ್ ಯುವ ಮುಖಂಡ ದೇವೇಗೌಡ, ಮಣಿಕಂಠ, ಅಬ್ದುಲ್ ಸಬ್ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading