ಮೊಳಕಾಲ್ಮೂರು: ತಾಲೂಕಿನ ಹಾನಗಲ್ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಪ್ರಕೃತಿ ವಿಕೋಪ ಹಾಗೂ ಬರದಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳ ಜಮೀನುಗಳನ್ನು ಪರಿಶೀಲಿಸಿ, ರೈತರ ಅಹವಾಲುಗಳನ್ನು ಆಲಿಸಿದರು.
ಪ್ರಕೃತಿ ವಿಕೋಪದಿಂದ ರೈತರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಹಾನಿಯ ಪ್ರಮಾಣದ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು. ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರವನ್ನು ತ್ವರಿತವಾಗಿ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಂತರ ನಡೆದ ಪ್ರಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಾನಿಯ ಪ್ರಮಾಣ, ಈಗಾಗಲೇ ಕೈಗೊಂಡಿರುವ ಪರಿಹಾರ ಕಾರ್ಯಗಳು ಹಾಗೂ ಮುಂದಿನ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ರೈತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಜಿಲ್ಲಾಧಿಕಾರಿ ವೆಂಕಟೇಶ್, ಕರ್ನಾಟಕ ರಾಜ್ಯ ದ್ರಾಕ್ಷಿ ವೈನ್ ಮಂಡಳಿ ನಿಗಮದ ಅಧ್ಯಕ್ಷ ಬಿ. ಯೋಗೀಶ್ ಬಾಬು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ. ತಾಜ್ ಪೀರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆಕಾಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಮೊಳಕಾಲ್ಮೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಲೀಂ ಉಲ್ಲಾ, ತಳಕು-ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.








About The Author
Discover more from JANADHWANI NEWS
Subscribe to get the latest posts sent to your email.