October 10, 2026
IMG-20261010-WA0540


ವರದಿ:ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ: ಮಾದಕ ವಸ್ತುಗಳಾದ ಗಾಂಜಾ, ಡ್ರಗ್ಸ್ ಸೇರಿದಂತೆ ಕಾನೂನಿನಡಿ ನಿಷೇಧಿತ ವಸ್ತುಗಳ ಸೇವನೆ ಮತ್ತು ಮಾರಾಟ ಅಪರಾಧವಾಗಿದೆ. ಇಂತಹ ಚಟುವಟಿಕೆಗಳು ಕಂಡುಬAದರೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ರಮೇಶ್‌ಗೌಡ ತಿಳಿಸಿದರು.
ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗಾಂಧೀಜಿಯವರು ಸತ್ಯ ಅಹಿಂಸೆ ಸಮಾನತೆ ಸ್ವಾವಲಂಬನೆ ಸಂಘಟಿತ ಹೋರಾಟದ ಮೂಲಕ ಸಮಾಜವನ್ನು ಜಾಗೃತಗೊಳಿಸಿದರು. ಯುವಜನರು ಮಾದಕ ವ್ಯಸನಕ್ಕೆ ಬಲಿಯಾಗದಂತೆ ಕುಟುಂಬದವರು ಎಚ್ಚರಿಕೆ ವಹಿಸಬೇಕು. ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಕೆಡಿಪಿ ಸದಸ್ಯೆ ದೀಪಿಕಾ ಸತೀಶ್ ಮಾತನಾಡಿ ವ್ಯಕ್ತಿಗಳ ಜೀವನದಲ್ಲಿ ನಡೆದ ಘಟನೆಗಳು ಮತ್ತು ಅನುಭವಗಳು ಇತರರಿಗೆ ಪಾಠವಾಗುತ್ತವೆ. ಅವುಗಳಿಂದ ಪ್ರೇರಣೆ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.
ಪ್ರಗತಿಪರ ರೈತ ಸೊಮೇನಹಳ್ಳಿ ಸ್ವಾಮಿ ಮಾತನಾಡಿ ಮಹಾತ್ಮ ಗಾಂಧೀಜಿಯವರು ಸತ್ಯಾಗ್ರಹದ ಮೂಲಕ ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿ. ಅವರ ತ್ಯಾಗ, ಅಹಿಂಸೆ ಮತ್ತು ಸತ್ಯದ ಮಾರ್ಗ ಇಂದಿಗೂ ಪ್ರಸ್ತುತವಾಗಿವೆ. ಕರ್ನಾಟಕದ ಮಣ್ಣಿನಲ್ಲಿಯೂ ಅನೇಕ ವೀರರು ಸ್ವಾತಂತ್ರ‍್ಯ ಹೋರಾಟದಲ್ಲಿ ಭಾಗವಹಿಸಿದ್ದಾರೆ. ವೀರ ಮದಕರಿ ನಾಯಕ ಸೇರಿದಂತೆ ಇತಿಹಾಸದಲ್ಲಿ ಮಹತ್ವದ ಕೊಡುಗೆ ನೀಡಿದ ಮಹನೀಯರ ತ್ಯಾಗವನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು
ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಬಿ.ಪಿ.ಓಂಕರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ನಾಗತಿಹಳ್ಳಿ ಮಂಜುನಾಥ್, ರಂಗಸ್ವಾಮಿ, ಅರಳಹಳ್ಳಿ ಬೋರೇಶ್, ಜನಜಾಗೃತಿ ವೇದಿಕೆಯ ಅಧಿಕಾರಿಗಳಾದ ಶಿವಣ್ಣ, ಚಂದ್ರಶೇಖರ್, ಡಾ: ಬ್ರಹ್ಮಪಾಲ್, ಇಲ್ಕಲ್ ಅಶೋಕ್, ಹಾಗೂ ತುಂಬಿನಕೆರೆ ಬಸವರಾಜ್, ರಮೇಶ್, ರುದ್ರಪ್ಪ, ಜ್ಯೋತಿ ಅರುಣಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading