March 17, 2026
1762785654654.jpg

ಹಿರಿಯೂರು:
ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ 16 ಕೆರೆಗಳು ಒಳಗೊಂಡಂತೆ ಹಿರಿಯೂರು, ಹೊಳಲ್ಕೆರೆ, ಚಳ್ಳಕೆರೆ, ಮೊಳಕಾಲ್ಮೂರು, ತಾಲ್ಲೂಕುಗಳ ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ಹರಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ತಾಲ್ಲೂಕಿನ ದಿಂಡಾವರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಉಪವಿದ್ಯುತ್ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.
ಹತ್ತು ವರ್ಷದ ಹಿಂದೆ ಇದ್ದಷ್ಟು ವಿದ್ಯುತ್ ಅಭಾವ ಈಗಿಲ್ಲ. 2013 ರಿಂದ 2018ರ ಅವಧಿಯಲ್ಲಿ ಸೌರವಿದ್ಯುತ್ ಉತ್ಪಾದನೆಗೆ ಕಾಂಗ್ರೆಸ್ ಸರ್ಕಾರ ಒತ್ತುಕೊಟ್ಟ ಪರಿಣಾಮ ಸಾಕಷ್ಟು ವಿದ್ಯುತ್ ಉತ್ಪಾದನೆ ಆಗುತ್ತಿದೆ. 2017 ರಲ್ಲಿಯೇ ಈ ಉಪಕೇಂದ್ರವನ್ನು ಮಂಜೂರು ಮಾಡಿಸಿದ್ದೆ ಮತ್ತೆ ನನ್ನದೇ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂಬುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಕೆ.ಪಿ.ಟಿ.ಎಲ್. ಎಂಜಿನಿಯರ್ ಮಂಜುನಾಥಸ್ವಾಮಿ, ಸಚಿನ್ ಚಕ್ರವರ್ತಿ, ಗ್ರಾಮಪಂಚಾಯಿತಿ ಅಧ್ಯಕ್ಷೆ ಯಲ್ಲಮ್ಮಹನುಮಂತಪ್ಪ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರಕೃಷ್ಣಪ್ಪ, ಮುಖಂಡರಾದ ಹೆಚ್.ಜಿ.ಶ್ರೀನಿವಾಸ್, ವಕೀಲ ಮಹೇಶ್, ರಂಗಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading