December 14, 2025
IMG-20251210-WA0289.jpg

ಚಳ್ಳಕೆರೆ: ದೇಶದ ಸಂವಿಧಾನವು ಮಕ್ಕಳಿಂದ ಹಿಡಿದು ವಯೋ ವೃದ್ಧರವರೆಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದ್ದು ಅವುಗಳನ್ನು ಪಾಲನೆ ಮಾಡುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಮೀರ್ ಪಿ ನಂದ್ಯಾಳ್ ತಿಳಿಸಿದರು. ನಗರದ ಬಾಪೂಜಿ ಬಾಲಕಿಯರ ಶಾಲಾ ಆವರಣದಲ್ಲಿ ವಕೀಲರ ಸಂಘ ಕಾನೂನು ಸೇವಾ ಸಮಿತಿ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜನರಿಗೆ ಕಾನೂನಿನ ಅರಿವಿಲ್ಲದಾಗ ನ್ಯಾಯಾಲಯಗಳ ಮೊರೆ ಹೋಗುತ್ತಾರೆ ಜನರಿಗೆ ಕಾನೂನಿನ ಅರಿವು ಮೂಡಿಸುವುದು ಕಾನೂನು ಸಲಹಾ ಸಮಿತಿಯ ಕರ್ತವ್ಯವಾಗಿದ್ದು ಈ ನಿಟ್ಟಿನಲ್ಲಿ ನ್ಯಾಯಾಲಯದಲ್ಲಿ ತನ್ನ ಕೆಲಸವನ್ನು ನಿರ್ವಹಿಸುತ್ತಿದೆ ಮಕ್ಕಳಿಗೆ ಬಾಲ್ಯ ವಿವಾಹ ಫೋಸ್ಕೋ ಕಾಯ್ದೆ ಸೇರಿದಂತೆ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ತಾಲೂಕಿನ 210 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಸಂತಸದ ವಿಷಯ ಸಂವಿಧಾನದ ಅಡಿಯಲ್ಲಿ ಬರುವ ಮೂಲಭೂತ ಹಕ್ಕುಗಳನ್ನು ಪಡೆದಿರುವ ನಾವು ನಮಗೂ ಸಹ ಮೂಲಭೂತ ಕರ್ತವ್ಯಗಳನ್ನು ನೀಡಿದೆ ದೇಶದ ಸೇವೆಗಾಗಿ ಇಂತಹ ಮಹತ್ವದ ಕೆಲವು ಜವಾಬ್ದಾರಿಯುತ ಕರ್ತವ್ಯಗಳನ್ನು ನಿರ್ವಹಿಸಬೇಕಾಗಿರುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ತಿಳಿಸಿದರು. ವಕೀಲರ ಸಂಘದ ಅಧ್ಯಕ್ಷ ಕೆ ಎಂ ನಾಗರಾಜ್ ಮಾತನಾಡಿ ದೇಶದ ಕಾನೂನಿನ ಅಡಿಯಲ್ಲಿ ಹುಟ್ಟಿನಿಂದ ಸಾಯುವವರೆಗೂ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ ದೇಶದಲ್ಲಿ ಜಾತಿ ಧರ್ಮ ಭೇದಭಾವವಿಲ್ಲದೆ ಎಲ್ಲರಿಗೂ ಸಮಾನವಾದ ಸಮಾನತೆ ತತ್ವ ನೀಡಿದೆ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕಾನೂನು ಗಳನ್ನು ತಿಳಿದುಕೊಳ್ಳುವುದು ಅತ್ಯವಶ್ಯಕ ಮಕ್ಕಳಿಗೆ ವಿಶೇಷವಾದ ಹಕ್ಕುಗಳಿದ್ದು ಗ್ರಾಮೀಣ ಭಾಗದಲ್ಲಿ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಕಾನೂನಿನ ತಿಳಿ ಹೇಳಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಸತ್ಯನಾರಾಯಣ ಶಿಕ್ಷಣ ಸಂಯೋಜಕ ದೇವೇಂದ್ರಪ್ಪ ವಕೀಲರ ಸಂಘದ ಉಪಾಧ್ಯಕ್ಷ ಪಿಪಾಲಯ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮುಖ್ಯ ಶಿಕ್ಷಕ ಶಶಿಧರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading