ಚಳ್ಳಕೆರೆ ತಾಲೂಕಿನ ಕೊರ್ಲಕುಂಟೆ ಗ್ರಾಮದಲ್ಲಿ ನಡೆಯಲಿರುವ ಜಾತ್ರೆಯ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪರಶುರಾಂಪುರ ಪೊಲೀಸ್ ಅಧಿಕಾರಿಗಳು ಗ್ರಾಮದಲ್ಲಿ ಶಾಂತಿ ಸಭೆ ನಡೆಸಿದರು.
ಸಭೆಯಲ್ಲಿ ಜಾತ್ರೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು. ಕಾನೂನು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ತಿಳಿಸಿ, ಜಾತ್ರೆ ಅವಧಿಯಲ್ಲಿ ಶಿಸ್ತು, ಸಂಯಮ ಮತ್ತು ಸಹಬಾಳ್ವೆ ಪಾಲಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಗ್ರಾಮಸ್ಥರು, ಹಿರಿಯರು, ಯುವಕರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದು, ಜಾತ್ರೆಯನ್ನು ಶಾಂತಿಯುತವಾಗಿ ನಡೆಸುವ ಬಗ್ಗೆ ಚರ್ಚೆ ನಡೆಸಲಾಯಿತು.
About The Author
Discover more from JANADHWANI NEWS
Subscribe to get the latest posts sent to your email.