January 30, 2026
1739283984601.jpg


ಹಿರಿಯೂರು :
ಮಧ್ಯ ಕರ್ನಾಟಕದ ಬಯಲು ಸೀಮೆಯ ಬೃಹತ್ ವಾಣಿವಿಲಾಸ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನಃಪ್ರಾರಂಭಿಸುವ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರೊಂದಿಗೆ ಚರ್ಚಿಸುವುದಾಗಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹಿರಿಯೂರು ತಾಲೂಕಿನ ರೈತಮುಖಂಡರುಗಳಿಗೆ ಭರವಸೆ ನೀಡಿದರು.
ಚಳ್ಳಕೆರೆ ನಗರಕ್ಕೆ ಹೋಗುವ ಮಾರ್ಗ ಮಧ್ಯ ಹಿರಿಯೂರಿನ ಚಳ್ಳಕೆರೆ ರಸ್ತೆ , ಕೃಷಿ ಇಲಾಖೆ ಸಮೀಪ ರೈತ ಸಂಘದ ಮುಖಂಡರೊಂದಿಗೆ ಚರ್ಚೆ ನಡೆಸಿ, ರೈತರ ಕನಸಾದ ವಾಣಿವಿಲಾಸ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವ ಭರವಸೆ ನೀಡಿ, ಅವರು ಮಾತನಾಡಿದರು.
ಈಗ ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯ ಇತಿಹಾಸದಲ್ಲಿ 3 ನೇಬಾರಿಗೆ ಕೋಡಿ ಬಿದ್ದಿದ್ದು, ಭದ್ರಾ ನೀರು ಸಹ ವಾಣಿವಿಲಾಸ ಸಾಗರಕ್ಕೆ ಹರಿಸುತ್ತಿದ್ದು, ವಾಣಿವಿಲಾಸ ಸಾಗರ ಅಚ್ಚುಕಟ್ಟು ಪ್ರದೇಶದಲ್ಲಿ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಂತರ್ಜಲದ ಮೂಲಕ ಕಬ್ಬು ಬೆಳೆಯಲು ವಿಫಲ ಅವಕಾಶವಿದ್ದು, ಈ ಸಂದರ್ಭದಲ್ಲಿ ಖಾತೆಯನ್ನು ಪುನಶ್ಚೇತನಗೊಳಿಸಲು ಸಕಾಲವಾಗಿದೆ ಎಂಬುದಾಗಿ ರೈತಮುಖಂಡ ಹೊರಕೇರಪ್ಪ ಕೃಷಿಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಎರಡು ರಾಷ್ಟ್ರೀಯ ಹೆದ್ದಾರಿಗಳ ಮಧ್ಯದಲ್ಲಿರುವ ಈ ಸಕ್ಕರೆ ಕಾರ್ಖಾನೆಯನ್ನು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಪುನಶ್ಚೇತನಗೊಳಿಸಲು ಎಲ್ಲಾರೀತಿಯ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ರೈತಮುಖಂಡರುಗಳಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ತಾಲೂಕು ಅಧ್ಯಕ್ಷ ಬಿ.ಓ.ಶಿವಕುಮಾರ್, ಕಾರ್ಯಾಧ್ಯಕ್ಷ ಎಚ್.ದಸ್ತಗಿರಿಸಾಬ್, ಯುವ ಘಟಕದ ಅಧ್ಯಕ್ಷ ಚೇತನ್ ಯಳನಾಡು, ಜಿಲ್ಲಾ ಉಪಾಧ್ಯಕ್ಷ ಎಂ.ಲಕ್ಷ್ಮಿಕಾಂತ್ , ತಾಲ್ಲೂಕು ಉಪಾಧ್ಯಕ್ಷ ಮೇಟಿಕುರ್ಕೆ ತಿಪ್ಪೇಸ್ವಾಮಿ, ಐನಳ್ಳಿ ರವೀಶ್, ಶ್ರೀಮತಿ ನಿತ್ಯಶ್ರೀ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಸಿ.ಎಚ್.ಕಾಂತರಾಜ್, ಸೇರಿದಂತೆ ಅನೇಕ ರೈತಮುಖಂಡರುಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading