ಚಿತ್ರದುರ್ಗಫೆ.10:
ನಗರದ ಜಿಲ್ಲಾ ಪಂಚಾಯಿತಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಲೀಡ್ ಬ್ಯಾಂಕ್ ವತಿಯಿಂದ ಹಮ್ಮಿಕೊಳ್ಳಲಾದ ಜಿಲ್ಲಾದ್ಯಂತ ನಡೆಯಲಿರುವ ಆರ್ಥಿಕ ಸಾಕ್ಷರತಾ ಸಪ್ತಾಹಕ್ಕೆ ಜಿ.ಪಂ.ಸಿಇಓ ಡಾ.ಆಕಾಶ್ ಎಸ್. ಅವರು ಸಪ್ತಾಹದ ಪೋಸ್ಟರ್ ಅನಾವರಣಗೊಳಿಸುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು.
ಆರ್ಥಿಕ ವ್ಯವಹಾರಗಳಲ್ಲಿ ಕೆವೈಸಿ (KYC) ಅಪ್‌ಡೇಟ್ ಮಾಡುವುದು ಬಹಳ ಮುಖ್ಯ. ಬ್ಯಾಂಕ್ ಖಾತೆಗಳಲ್ಲಿ ಇ-ಕೆವೈಸಿ ಮತ್ತು ಸಿ-ಕೆವೈಸಿ ಮಾಡುವ ವಿಧಾನಗಳು ಹಾಗೂ ಇವುಗಳಿಂದಾಗುವ ಅನುಕೂಲಗಳ ಬಗ್ಗೆ ಸಾರ್ವಜನಿಕರು ಅರಿವು ಹೊಂದಿರಬೇಕು. ಆರ್ಥಿಕ ಸಾಕ್ಷರತಾ ಸಪ್ತಾಹದಲ್ಲಿ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಿ, ಸಪ್ತಾಹವನ್ನು ಯಶಸ್ವಿಗೊಳಿಸುವಂತೆ ಸಿಇಓ ಡಾ.ಆಕಾಶ್.ಸಿ ಕರೆ ನೀಡಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಘವೇಂದ್ರ ಎಂ., ಆರ್‌ಬಿಐ ರೀಜನಲ್ ಮ್ಯಾನೇಜರ್ ಜಗನ್ನಾಥ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ರಣವೀರ್, ಎಸ್‌ಬಿಐ ವ್ಯವಸ್ಥಾಪಕ ಮಹೇಶ್ವರಪ್ಪ, ಆರ್ಥಿಕ ಸಾಕ್ಷರತಾ ಕೇಂದ್ರ ಸಲಹೆಗಾರ ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲೆಯ ವಿವಿಧ ಬ್ಯಾಂಕ್‌ಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.