ವರದಿ ಕೆ.ಟಿ. ಓಬಳೇಶ್ ನಲಗೇತನಹಟ್ಟಿ.
ನಾಯಕನಹಟ್ಟಿ: ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯ ನಿಮಿತ್ತ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯ ಹಾಗೂ ಸ್ವಚ್ಛತೆಗೆ ಮೊದಲು ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.







ಮಾ 16 ರಂದು ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ರಥೋತ್ಸವ ನಡೆಯಲಿದ್ದು, ಈ ರಥೋತ್ಸವಕ್ಕೆ ಸುಮಾರು 5 ರಿಂದ 6 ಲಕ್ಷ ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಅತಿ ಹೆಚ್ಚು ಬಿಸಿಲು ಇರುವುದರಿಂದ ಭಕ್ತಾದಿಗಳಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಒದಗಿಸುವ ಬೇಕೆಂದು ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಓ ಶ್ರೀನಿವಾಸ್ ಅವರಿಗೆ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಸೂಚನೆ ನೀಡಿದರು.
ಚಿಕ್ಕೆಕೆರೆ ಏರಿ ಮೇಲೆ ವಿದ್ಯುತ್ ದೀಪ, ಸಿ ಸಿ ಕ್ಯಾಮೆರಾ, ಬ್ಯಾರಿಕೆಟ್, ಪೊಲೀಸ್ ಬಿಗಿ ಬಂದೋಬಸ್ ವ್ಯವಸ್ಥೆ ಕಲ್ಪಿಸಬೇಕು. ಶ್ರೀ ಗುರುತಿಪುರದ್ರ ಸ್ವಾಮಿ ನಿರ್ಮಿಸಿರುವ ಎರಡು ಕೆರೆಗಳು ಭರ್ತಿಯಾಗಿದ್ದು, ಜಾತ್ರೆಗೆ ಬಂದಂತ ಭಕ್ತಾದಿಗಳು ಕೆರೆಗೆ ಇಳಿಯುವ ಸಾಧ್ಯತೆ ಇರುವುದರಿಂದ ಜಾಗೃತ ವಹಿಸುವಬೇಕೆಂದು ಪೋಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ತೇರು ಬೀದಿ ಡಾಂಬರೀಕರಣ ಮಾಡಿದ ಮೇಲೆ ಪೌಡರ್ ಹಾಕಬೇಕು. ತೇರು ಸಾಗಲು ಯಾವುದೇ ಅಡಚಣೆ ಆಗದಂತೆ ಕ್ರಮ ವಹಿಸಬೇಕು. ಪಟ್ಟಣದ ಎಲ್ಲಾ ಕಡೆಗಳಲ್ಲಿ ಕಸದ ಡಬ್ಬಿಗಳನ್ನು ಇಡಬೇಕು. ಪಟ್ಟಣದಲ್ಲಿ ತಂಡಗಳನ್ನು ರಚಿಸಿಕೊಂಡು ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವಂತೆ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ತಹಸಿಲ್ದಾರ್ ರೆಹಾನ್ ಪಾಷಾ, ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ಎಚ್ ಗಂಗಾಧರಪ್ಪ, ಸದಾಶಿವಯ್ಯ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ಓ. ಶ್ರೀನಿವಾಸ್, ಕಂದಾಯ ನಿರೀಕ್ಷಕ ಚೇತನ್ ಕುಮಾರ್, ದೇವಸ್ಥಾನದ ಸಿಬ್ಬಂದಿ ಸತೀಶ್, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಶ್ರೀಕಾಂತ್, ತಳಕು ಮತ್ತು ನಾಯಕನಹಟ್ಟಿ ವೃತ ನಿರೀಕ್ಷಕ ಹನುಮಂತಪ್ಪ ಎಂ, ಶಿರೇಹಳ್ಳಿ, ಪಿಎಸ್ಐ ದೇವರಾಜ್, ನಾಯಕನಹಟ್ಟಿ ಬೆಸ್ಕಾಂ ಶಾಖಾಧಿಕಾರಿ ಎನ್.ಬಿ. ಬೋರಣ್ಣ, ಪೊಲೀಸ್ ಸಿಬ್ಬಂದಿಗಳಾದ ಅಣ್ಣಪ್ಪ ನಾಯ್ಕ, ರಾಜು, ಇದ್ದರು
About The Author
Discover more from JANADHWANI NEWS
Subscribe to get the latest posts sent to your email.