ಹೊಸದುರ್ಗ: ತಾಲ್ಲೂಕಿನ ರಾಜಯೋಗಿ ವಿಶ್ರಾಂತಿ ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರಿಗಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.






ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ. ಎಂ.ಎಲ್. ನದಾಫ್ ಮಾತನಾಡಿ, ಹಿರಿಯ ನಾಗರಿಕರಲ್ಲಿ ಕಂಡುಬರುವ ಹಲವು ಸಹಜ ಕಾಯಿಲೆಗಳಿಗೆ ಆಯುರ್ವೇದ ಚಿಕಿತ್ಸೆ ಪರಿಣಾಮಕಾರಿ ಆಗಿದ್ದು, ಎಲ್ಲರೂ ಆಯುರ್ವೇದ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಗುತ್ತಿಗೆ ತಜ್ಞ ವೈದ್ಯರಾದ ಡಾ. ಪವನ್ ಕುಮಾರ್ ಸಫಾರೆ ಮಾತನಾಡಿ, ವೃದ್ಧರಲ್ಲಿ ಸಾಮಾನ್ಯವಾಗಿ ಕಾಣಿಸುವ ಸಂಧಿವಾತ, ಮಲಬದ್ಧತೆ, ಅನಿದ್ರೆ, ಮಧುಮೇಹ, ಅಧಿಕ ರಕ್ತದೊತ್ತಡ ಮುಂತಾದ ಕಾಯಿಲೆಗಳಿಗೆ ಲಘುವಾದ ಆಹಾರ, ನಿಯಮಿತ ವ್ಯಾಯಾಮ, ಪ್ರಾಣಾಯಾಮ ಹಾಗೂ ಆಯುರ್ವೇದ ಚಿಕಿತ್ಸೆಯನ್ನು ಅನುಸರಿಸುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಹೆಚ್. ಬಸವರಾಜ, ಡಾ. ಎಂ.ಎಲ್. ನದಾಫ್, ಡಾ. ಪವನ್ ಕುಮಾರ್ ಸಫಾರೆ, ಡಾ. ವಸಂತಕುಮಾರಿ, ಗುರು ಬಸವರಾಜ, ವಿಜಯಕುಮಾರಿ, ಕಿರಣ್, ಗಿರೀಶ್, ಕಿರಣ್ ಹಾಗೂ ಶ್ರೀನಿವಾಸ್ ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.