ಹೊಸದುರ್ಗ: ಯುವಕರು ಮಾದಕ ವ್ಯಸನಿಗಳಾಗದಂತೆ ದೂರವಿರಬೇಕು. ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವುದರ ಜೊತೆಗೆ ಸೇವಾ ಮನೋಭಾವನೆ ಬೆಳೆಸಿಕೊಳ್ಳುವ ಅಗತ್ಯತೆಯಿದೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಆಯೋಜಿಸಿದ್ದ ಒಂದು ವಾರಗಳ ಕಾಲದ ಶಿಬಿರವನ್ನ ಗುರುವಾರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಸಹಾಯ ಮಾಡುವ ಒಂದು ಚಟುವಟಿಕೆಯೇ ರಾಷ್ಟ್ರೀಯ ಸೇವಾ ಯೋಜನೆ. ಸಂಸ್ಥೆಯು ಯುವ ಶಕ್ತಿ ಮತ್ತು ಸಾಮರ್ಥ್ಯವನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳುವ ಮೂಲಕ ಅವರಲ್ಲಿ ಸಮುದಾಯ ಸೇವೆಯ ಉತ್ಸಾಹವನ್ನು ಮೂಡಿಸುತ್ತಿದೆ. ಎನ್‌ಎಸ್‌ಎಸ್ ಯುವಕ/ ಯುವತಿಯರನ್ನು ಅರ್ಥಪೂರ್ಣ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಗುರಿಯನ್ನು ಹೊಂದಿದ್ದು, ಇದು ಅಂತಿಮವಾಗಿ ಸಮಾಜದೊಂದಿಗೆ ಪರಿಣಾಮಕಾರಿಯಾಗಿ ಸಂಯೋಜಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಅಶ್ವತ್ ಯಾದವ್ ಮಾತನಾಡಿ, ಎನ್‌ಎಸ್‌ಎಸ್ (ರಾಷ್ಟ್ರೀಯ ಸೇವಾ ಯೋಜನೆ) ಶಿಬಿರವು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ವ್ಯಕ್ತಿತ್ವ ವಿಕಸನ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ 7 ದಿನಗಳ ವಿಶೇಷ ವಾರ್ಷಿಕ ಕಾರ್ಯಕ್ರಮವಾಗಿದೆ. ಈ ಶಿಬಿರಗಳಲ್ಲಿ ಸ್ವಚ್ಛತಾ ಕಾರ್ಯ, ಗ್ರಾಮಗಳ ಅಭಿವೃದ್ಧಿ, ಆರೋಗ್ಯ ಜಾಗೃತಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನವನ್ನು ಅರ್ಥಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಶಾಂತ ಮೂರ್ತಿ, ಐಕ್ಯೂಐಸಿ ಸಂಚಾಲಕ ಸತೀಶ್, ಯೋಜನಾಧಿಕಾರಿಗಳಾದ ಧನಂಜಯ್ ಮತ್ತು ಸುಬ್ರಮಣ್ಯ ಶೆಟ್ಟಿ ಸೇರಿದಂತೆ ಕಾಲೇಜು ಪ್ರಾಧ್ಯಾಪಕ ವರ್ಗ, ಸಿಬ್ಬಂದಿಗಳು, ಗ್ರಾಮಸ್ಥರು ಮತ್ತು ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
About The Author
Discover more from JANADHWANI NEWS
Subscribe to get the latest posts sent to your email.