May 12, 2026
IMG-20260511-WA0170.jpg

ಚಳ್ಳಕೆರೆ: ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ದೈವಾಧೀನ ಹಿನ್ನೆಲೆ ಚಳ್ಳಕೆರೆ ನಗರದ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಭಾವಪೂರ್ಣವಾಗಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ದಿವಂಗತ ಸುಧಾಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಜೊತೆಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ದೇವರು ನೀಡಲೆಂದು ದೇವರಲ್ಲಿ ಬೇಡಿಕೊಂಡರು.
ಡಿ.ಸುಧಾಕರ್ ಅವರು ಸಮಾಜಮುಖಿ ಚಿಂತನೆ ಹಾಗೂ ಜನಪರ ಸೇವೆಗಳ ಮೂಲಕ ಜನಮನದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದಾರೆ ಎಂದು ಕಾರ್ಯಕ್ರಮದಲ್ಲಿ ಮಾತನಾಡಿದವರು ಸ್ಮರಿಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading