August 11, 2026
IMG-20260811-WA0267


ವರದಿ:ನಾಗತಿಹಳ್ಳಿಮಂಜುನಾಥ್
ಹೊಸದುರ್ಗ: ಸರ್ಕಾರಿ ಬಸ್ ಚಲಿಸುತ್ತಿದ್ದ ಸಂಧರ್ಬದಲ್ಲಿ ಬಸ್ ಬಾಗಲ ಬಳಿ ನಿಂತಿದ್ದ ವಿದ್ಯಾರ್ಥಿಯೊಬ್ಬ ಬಸ್‌ನಿಂದ ಕೆಳಗೆ ಬಿದ್ದು ಕಾಲಿಗೆ ಪೆಟ್ಟು ಮಾಡಿಕೊಂಡ ಘಟನೆ ಖಂಡಿಸಿ ಹಾಗೂ ಶಾಲಾ-ಕಾಲೇಜು ಸಮಯಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು ಸರ್ಕಾರಿ ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ದೊಡ್ಡತೇಕಲವಟ್ಟಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ತಾಲೂಕಿನ ಶ್ರೀರಾಂಪುರದಿAದ ದೊಡ್ಡ ತೇಕಲವಟ್ಟಿಗೆ ಬರುತ್ತಿದ್ದ ಸರ್ಕಾರಿ ಬಸ್ ಬೆಳಿಗ್ಗೆ ಸುಮಾರು ೮.೩೦ ಕ್ಕೆ ದೊಡ್ಡತೇಕಲವಟ್ಟಿಹಳ್ಳಿಗೆ ಆಗಮಿಸಿದಾಗ, ಡಿಪ್ಲೊಮಾ ವಿದ್ಯಾರ್ಥಿ ಪವನ್ ಬಸ್ ಹತ್ತಿದ್ದಾನೆ, ಬಸ್ ಪುಲ್ ರಷ್ ಇದ್ದ ಕಾರಣ ಬಸ್ ಒಳಗೆ ಹೋಗಲು ಹೋಗುತ್ತಿದ್ದ ಸಂದರ್ಭದಲ್ಲಿ ಬಸ್ ಚಲಿಸಲು ಪ್ರಾರಂಭಿಸಿದಾಗ ಬಾಗಿಲಿನಿಂದ ಕೆಳಗೆ ಬಿದ್ದಿದ್ದಾನೆ. ಪರಿಣಾಮ ಆತನ ಕೈ ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.
ಘಟನೆಯಿಂದ ಆಕ್ರೋಶಗೊಂಡ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು. ದೊಡ್ಡತೇಕಲವಟ್ಟಿಯಿಂದ ಪ್ರತಿನಿತ್ಯ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ ಸೇರಿದಂತೆ ವಿವಿಧ ಕಾಲೇಜುಗಳಿಗೆ ನೂರಾರು ವಿದ್ಯಾರ್ಥಿಗಳು ಪ್ರಯಾಣಿಸುತ್ತಾರೆ. ಆದರೆ ಬೆಳಿಗ್ಗೆ ೮.೩೦ ಮತ್ತು ೯ ಗಂಟೆ ವೇಳೆಗೆ ಎರಡು ಸರ್ಕಾರಿ ಬಸ್‌ಗಳು ಮಾತ್ರ ಸಂಚರಿಸುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳಲ್ಲಿ ಸ್ಥಳಾವಕಾಶವಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಹೆಚ್ಚುವರಿ ಬಸ್‌ಗೆ ಒತ್ತಾಯ: ಶ್ರೀರಾಂಪುರದಿAದಲೇ ಬಸ್‌ಗಳು ವಿದ್ಯಾರ್ಥಿಗಳಿಂದ ತುಂಬಿಕೊAಡು ಬರುತ್ತಿರುವುದರಿಂದ ಚೇಕಲವಟ್ಟಿಯ ವಿದ್ಯಾರ್ಥಿಗಳಿಗೆ ಬಸ್ ಹತ್ತಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಳಗಿನ ಸಮಯದಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದಲ್ಲದೆ, ಬಸ್ ಚಾಲಕರು ಹಾಗೂ ನಿರ್ವಾಹಕರು ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುತ್ತಿಲ್ಲ. ಬೇಕಾಬಿಟ್ಟಿಯಾಗಿ ಬಸ್ ಚಲಾಯಿಸುತ್ತಿರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಅಧಿಕಾರಿಗಳ ವಿರುದ್ಧ ಆಕ್ರೋಶ: ತಾಲೂಕಿನ ಈ ಭಾಗದಲ್ಲಿ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಪ್ರತಿದಿನ ಪರದಾಡುವಂತಾಗಿದೆ. ಈ ಕುರಿತು ಸಂಬAಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಮಂಗಳವಾರ ವಿದ್ಯಾರ್ಥಿಗಳು ಸುಮಾರು ಮೂರು–ನಾಲ್ಕು ಗಂಟೆಗಳ ಕಾಲ ಬಸ್ ನಿಲ್ದಾಣ ಹಾಗೂ ರಸ್ತೆಯಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಘಟನೆ ಸಂಭವಿಸಿ ನಾಲ್ಕು ಗಂಟೆಯ ನಂತರ ಡಿಪೋ ವ್ಯವಸ್ಧಾಪಕರು ಸ್ಧಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೋಲಿಸಿ ಇನ್ನು ಒಂದು ವಾರದೊಳಗೆ ಮತ್ತೊಂದು ಬಸ್ ಬಿಡುವ ಭರವಸೆ ನೀಡಿದಾಗ ವಿದ್ಯಾರ್ಥಿಗಳಿ ಪ್ರತಿಭಟನೆಯನ್ನ ಹಿಂಪಡೆದರು.
ಪ್ರತಿಭಟನೆಯಲ್ಲಿ ರೈತ ಮುಖಂಡ ಕಂಚೀಪುರದ ಸಿ.ಟಿ.ರುದ್ರೇಶ್ ಸೇರಿದಂತೆ ಗ್ರಾಮಸ್ಧರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading