September 14, 2025
IMG-20250911-WA0149.jpg

ಚಳ್ಳಕೆರೆ: ಗ್ರಾಮೀಣ ಭಾಗದ ಚಿಕ್ಕ ಪುಟ್ಟ ಸಮಸ್ಯೆಗಳನ್ನು ಉನ್ನತ ಮಟ್ಟದ ಅಧಿಕಾರಿಗಳ ಮಟ್ಟಕ್ಕೆ ಕೊಂಡಯ್ಯದೆ ಗ್ರಾಮಗಳಲ್ಲಿ ಬಗೆಹರಿಸಿಕೊಳ್ಳುವ ಜಾಣ್ಮೆಯನ್ನು ಜನಸಾಮಾನ್ಯರು ತೋರಿದಾಗ ಮಾತ್ರ ಗ್ರಾಮೀಣ ಭಾಗಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಶಿಧರ್ ಅಭಿಪ್ರಾಯ ಪಟ್ಟರು.

ನಗರದ ರೋಟರಿ ಬಾಲ ಭವನದಲ್ಲಿ ತಾಲೂಕು ಪರಿಶಿಷ್ಟ ವರ್ಗಗಳ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಆದಿ ಕರ್ಮ ಯೋಗಿ ಅಭಿಯಾನ ಬ್ಲ್ಯಾಕ್ ಮಟ್ಟದ ತರಬೇತುದಾರರ ಓರಿಯಂಟಲ್ ತರಬೇತಿ ಹಾಗೂ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಭಾಗಗಳ ಸಮಸ್ಯೆಗಳಿಗೆ ಬೇರೆಡೆ ಬೆರಳು ಮಾಡಿ ತೋರಿಸುವ ಬದಲು ತಾವೇ ಅದನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಜನಸಾಮಾನ್ಯರು ಕಾರ್ಯಯೋರಾಗಬೇಕು ದೇಶಾದ್ಯಂತ ಕರ್ಮಯೋಗಿ ಅಭಿಯಾನ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಅಡಿ 17 ಇಲಾಖೆಗಳು ಕಾರ್ಯನಿರ್ವಹಿಸಲಿದ್ದು ಇಲಾಖೆಗಳ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದ್ದು ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಈ ಕಾರ್ಯಕ್ರಮ ಸಹಕಾರಿಯಾಗಲಿದ್ದು ನಮ್ಮ ಗ್ರಾಮ ಸಮೃದ್ಧಿ ಕನಸು ಎಂಬ ಕ್ರಿಯಾಯೋಜನೆಯನ್ನು ಸೆ.30ರೊಳಗೆ ತಯಾರಿಸಿ ಕೇಂದ್ರ ಸರ್ಕಾರಕ್ಕೆ ನೀಡಿದರೆ ಅನುದಾನ ಬಿಡುಗಡೆಗೊಳ್ಳುತ್ತದೆ ಆಗ ಗ್ರಾಮಗಳಲ್ಲಿನ ಹಿಂದುಳಿದಿರುವ ಬುಡಕಟ್ಟು ಜನಾಂಗವನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ತರಬೇತುದಾರರು ನಿರ್ಲಕ್ಷ ತೋರದೆ ಉತ್ತಮ ತರಬೇತಿ ಪಡೆದು ಕಾರ್ಯ ಪ್ರವೃತ್ತರಾಗಬೇಕು ಎಂದು ಕರೆ ನೀಡಿದರು. 

ಜಿಲ್ಲಾ ಪರಿಶಿಷ್ಟ ವರ್ಗಗಳ ಅಧಿಕಾರಿ ದಿವಾಕರ್ ಮಾತನಾಡಿ ಕೇಂದ್ರ ಸರ್ಕಾರ ಸುಮಾರು 5 ಕೋಟಿ ಬುಡಕಟ್ಟು ವರ್ಗದ ಜನರ ಅಭಿವೃದ್ಧಿಗೊಳಿಸಿ ಸಮಾಜದ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಈ ಕಾರ್ಯಕ್ರಮವನ್ನು ರೂಪಿಸಿದ್ದು ತರಬೇತಿ ಪಡೆದ ಸಿಬ್ಬಂದಿ ಉತ್ತಮ ರೀತಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿ ಸರ್ಕಾರದ ಯೋಜನೆಯನ್ನು ಸಾಕಾರ ಗೊಳಿಸಬೇಕು ಎಂದು ತಿಳಿಸಿದರು. 

ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪರಿಶಿಷ್ಟ ವರ್ಗಗಳ ಅಧಿಕಾರಿ ಶಿವರಾಜ್ ಮಾತನಾಡಿ ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸೇವೆ ಸಂಕಲ್ಪ ಸಮರ್ಪಣೆ ಎಂಬ ಧ್ಯೇಯದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದುಈ ಕಾರ್ಯಕ್ರಮದಿಂದ ದೇಶದ 8 ಕೋಟಿ 38 ಲಕ್ಷ ಬುಡಕಟ್ಟು ಜನರಿಗೆ ಅನುಕೂಲವಾಗಲಿದ್ದು ಈ ಕಾರ್ಯಕ್ರಮದಿಂದ ಬುಡಕಟ್ಟು ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶವಾಗಿದೆ ಕೇಂದ್ರ ಸರ್ಕಾರ ಬುಡಕಟ್ಟು ಜನರಿಗೆ ಸೌಲಭ್ಯ ಕಲ್ಪಿಸಲು 25 ಅಂಶಗಳ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜಿಲ್ಲೆಯ 87 ಗ್ರಾಮಗಳನ್ನು ಯೋಜನೆಗೆ ಆಯ್ಕೆ ಮಾಡಿದ್ದು ತಾಲೂಕಿನ 21 ಪಂಚಾಯಿತಿಗಳ 32 ಗ್ರಾಮಗಳನ್ನು ಈ ಕಾರ್ಯಕ್ರಮ ಅನುಷ್ಠಾನಗೊಳಿಸಲು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಶಿರಸ್ತೆದಾರ ಗಿರೀಶ್ ದಿವಾಕರ್ ಶಿವರಾಜ್ ರಾಮಚಂದ್ರಪ್ಪ ಸಿ ಡಿ ಪಿ ಓ ರಾಜ ನಾಯಕ್ ಭಾರತಿ ನಾಯಕ್ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading