September 14, 2025
1757597093641.jpg


ಚಿತ್ರದುರ್ಗಸೆ.11:
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಹತ್ತಿರ ಮತ್ತು ಹೊಸದುರ್ಗ ತಾಲ್ಲೂಕಿನ ಬಾಗೂರು ಹಾಗೂ ಮಲ್ಲಪ್ಪನಹಳ್ಳಿ ಗ್ರಾಮಗಳಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ, ದಂಡ ವಿಧಿಸಿದೆ.
ಯುವ ಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ. ಎಂದು ಯುವಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುತ್ತಾ, ತಂಬಾಕು ಕಾರ್ಯಾಚರಣೆಯನ್ನು ಮಾಡಿ ಸಾರ್ವಜನಿಕರಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿಯನ್ನು ಮೂಡಿಸಲಾಯಿತು.
ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 28 ಕೇಸುಗಳನ್ನು ದಾಖಲಿಸಿ ರೂ. 2850 ದಂಡವನ್ನು, ಸೆಕ್ಷನ್-6ಎ ಅಡಿಯಲ್ಲಿ 12 ಕೇಸುಗಳನ್ನು ದಾಖಲಿಸಿ ರೂ. 1150 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 7 ಕೇಸುಗಳನ್ನು ದಾಖಲಿಸಿ ರೂ. 950 ದಂಡವನ್ನು ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಜಿ.ಕೆ.ಪ್ರವೀಣ್, ಸಿದ್ದರಾಮಪ್ಪ, ವಿಶ್ವ ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading