ವರದಿ: ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ: ವಾಣಿ ವಿಲಾಸ ಸಾಗರದ ಹಿನ್ನೀರಿನಿಂದ ಹಾನಿಗೊಳಗಾದ ರಸ್ತೆ ಹಾಗೂ ಸೇತುವೆಗಳ ಪುನರ್‌ನಿರ್ಮಾಣಕ್ಕೆ ₹೧೨೦ ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು.
ವಾಣಿ ವಿಲಾಸ ಸಾಗರ ಜಲಾಶಯವು ಸುಮಾರು ೮೦ ವರ್ಷಗಳ ಬಳಿಕ ಭರ್ತಿಯಾಗಿ ಕೋಡಿ ಹರಿದಿರುವುದು ಈ ಭಾಗದ ಪಾಲಿಗೆ ಮಹತ್ವದ ಬೆಳವಣಿಗೆಯಾಗಿದೆ. ಆದರೆ ಜಲಾಶಯದ ಹಿನ್ನೀರಿನಿಂದ ಕೆಲವು ಪ್ರದೇಶಗಳಲ್ಲಿ ಜಮೀನು ಹಾಗೂ ರಸ್ತೆಗಳು ಮುಳುಗಡೆಯಾಗಿ ರೈತರು ಮತ್ತು ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದರು. ಸಂಕಷ್ಟಕ್ಕೊಳಗಾದ ರೈತರಿಗೆ ₹೧ ಕೋಟಿ ಪರಿಹಾರ ನೀಡಲಾಗಿದೆ.
ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುತ್ತಿರುವ ಮತದಾರರು ಹಾಗೂ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಗೋವಿಂದಪ್ಪ, ನೀರು ತಲುಪದ ಪ್ರತಿಯೊಂದು ಕೆರೆಗೂ ನೀರು ಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.
About The Author
Discover more from JANADHWANI NEWS
Subscribe to get the latest posts sent to your email.