ಚಿತ್ರದುರ್ಗ ಸೆ.11:
ಜಿಲ್ಲಾಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಇದೇ ಸೆಪ್ಟೆಂಬರ್ 17ರಂದು ಬೆಳಿಗ್ಗೆ 10ಕ್ಕೆ ನಗರದ ಬಿ.ಡಿ.ರಸ್ತೆಯ ಹಳೇ ಮಾಧ್ಯಮಿಕ ಆವರಣದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆ ಏರ್ಪಡಿಸಲಾಗಿದೆ.
ಆಸಕ್ತ ಹಿರಿಯ ನಾಗರಿಕರು ಸೆಪ್ಟೆಂಬರ್ 17ರಂದು ಬೆಳಿಗ್ಗೆ 9.30 ಗಂಟೆಗೆ ಹೆಸರು ನೋಂದಾಯಿಸಿ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಕೋರಿದೆ.
ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‍ನಲ್ಲಿ ಬಾಲ್ ಎಸೆಯುವುದು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಾದ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ ಸ್ಪರ್ಧೆಗಳು ಮಹಿಳೆಯು ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ನಡೆಯಲಿವೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.