ವರದಿ: ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ: ಶ್ರೀ ದುರ್ಗಾ ಸೇವಾ ಸಮಿತಿ ವತಿಯಿಂದ ಪಟ್ಟಣದ ಅಶೋಕ ರಂಗಮAದಿರದಲ್ಲಿ ದ್ವಿತೀಯ ಸಂಕಲ್ಪದ ೯ನೇ ವರ್ಷದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಹೊಸದುರ್ಗ ದಸರಾ ಉತ್ಸವಕ್ಕೆ ಭಕ್ತಿಭಾವದಿಂದ ಚಾಲನೆ ನೀಡಲಾಯಿತು.
ದುರ್ಗಾದೇವಿಯ ಒಂಬತ್ತು ಅವತಾರಗಳಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘAಟಾ, ಕೂಷ್ಮಾಂಡಾ, ಸ್ಕಂದಮಾತಾ, ಕಾತ್ಯಾಯನಿ, ಕಾಲರಾತ್ರಿ, ಮಹಾಗೌರಿ ಹಾಗೂ ಸಿದ್ಧಿದಾತ್ರಿ ದೇವಿಯರ ಮೂರ್ತಿಗಳನ್ನು ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು. ಅಮ್ಮನವರಿಗೆ ವಿಶೇಷ ಅಭಿಷೇಕ, ಸಾಮೂಹಿಕ ಕೋಟಿ ಕುಂಕುಮಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ಒಂಬತ್ತು ದಿನಗಳ ಕಾಲ ನಡೆಯಲಿರುವ ಮಹೋತ್ಸವದಲ್ಲಿ ಹೋಮ, ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ನವರಾತ್ರಿ ಶಕ್ತಿ ಆರಾಧನೆಯ ಪ್ರಮುಖ ಹಬ್ಬವಾಗಿದ್ದು, ದುಷ್ಟಶಕ್ತಿಯ ವಿರುದ್ಧ ಒಳಿತಿನ ವಿಜಯವನ್ನು ಸಾರುತ್ತದೆ. ದೇವಿಯ ಒಂಬತ್ತು ಸ್ವರೂಪಗಳು ಶಕ್ತಿ, ಧೈರ್ಯ, ಜ್ಞಾನ ಮತ್ತು ಧರ್ಮದ ಸಂಕೇತಗಳಾಗಿವೆ. ಈ ಹಿನ್ನೆಲೆಯಲ್ಲಿ ನವದುರ್ಗೆಯರ ಪ್ರತಿಷ್ಠಾಪನೆ ಭಕ್ತರ ಗಮನ ಸೆಳೆಯಿತು.
ಒಂಬತ್ತನೇ ವರ್ಷಕ್ಕೆ ಕಾಲಿಟ್ಟಿರುವ ಮಹೋತ್ಸವವು ಪಟ್ಟಣದಲ್ಲಿ ಧಾರ್ಮಿಕ ಸಂಭ್ರಮಕ್ಕೆ ಸಾಕ್ಷಿಯಾಗಿದೆ. ದೇವಿಯ ದರ್ಶನ ಪಡೆದು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಲೋಕಕಲ್ಯಾಣ, ಉತ್ತಮ ಮಳೆ-ಬೆಳೆ, ಸುಖ-ಶಾಂತಿ ಹಾಗೂ ಸರ್ವರ ಒಳಿತಿಗಾಗಿ ಭಕ್ತರು ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದುರ್ಗಾ ಸೇವಾ ಸಮಿತಿ ಅಧ್ಯಕ್ಷ ಟಿ. ಮಂಜುನಾಥ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾವಿರಾರು ಭಕ್ತರು ಪಾಲ್ಗೊಂಡು ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು.
About The Author
Discover more from JANADHWANI NEWS
Subscribe to get the latest posts sent to your email.