January 29, 2026
IMG-20260112-WA0415.jpg

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ. ರಘುಮೂರ್ತಿ ಅವರು ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಶ್ರೀ ಊರು ಮಾರಮ್ಮ ದೇವಿ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುದ್ರೇಶ್, ಪಂಚಾಯತ್ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಮುಖಂಡರಾದ ಜಗಳೂರುಸ್ವಾಮಿ, ರಂಗಸ್ವಾಮಿ, ಪ್ರಕಾಶ್, ನಿಜಲಿಂಗಪ್ಪ, ಚನ್ನಕೇಶವ, ನಾಗಭೂಷಣ, ರಮೇಶ್ ಗೌಡ, ರಾಘವೇಂದ್ರ, ಕಿಸಾನ್ ಸೇಲ್ ನಾಗರಾಜ, ಜಯಕುಮಾರ್, ಜಯವೀರಾಚಾರಿ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನೆರವೇರಿದ್ದು, ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading