ಚಳ್ಳಕೆರೆ: ನಾಳೆ ಕೆಲಸವನ್ನು ಇಂದೇ ಮಾಡು ಇಂದಿನ ಕೆಲಸವನ್ನು ಈಗಲೇ ಮಾಡು ಎಂಬ ಗಾಂಧೀಜಿ ತತ್ವದ ಅಡಿಯಲ್ಲಿ ಎಲ್ಲಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದಾಗ ಮಾತ್ರ ಗ್ರಾಮೀಣ ಹಾಗೂ ನಗರ ಭಾಗದ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸಾಧ್ಯ ಎಂದು ಜಿಲ್ಲಾ ಉಪ ವಿಭಾಗಾಧಿಕಾರಿ ಮಹಬೂಬ್ ಜಿಲಾನ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.






ನಗರದ ತಾಲೂಕು ಕಚೇರಿ ಆವರಣದಲ್ಲಿ ಸಿಬ್ಬಂದಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗಾಗಿ ಗ್ರಾಮೀಣ ಭಾಗದ ಜನರು ತಾಲೂಕು ಕಚೇರಿ ಸೇರಿದಂತೆ ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುತ್ತಾರೆ. ಅವರ ಸಮಸ್ಯೆಯನ್ನು ಸಮರ್ಥ ರೀತಿಯಲ್ಲಿ ಆಲಿಸಿ ತುರ್ತಾಗಿ ಬಗೆಹರಿಸಿದಾಗ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಾರೆ ಸರ್ಕಾರಿ ಕಚೇರಿಗಳಲ್ಲಿ ದಿನಗಟ್ಟಲೆ ಅಲೆದರು ಕೆಲಸವಾಗುವುದಿಲ್ಲ ಎಂಬ ಸಾರ್ವಜನಿಕರ ಆರೋಪವನ್ನು ದೂರ ಮಾಡಬೇಕಾದರೆ ತಾವುಗಳು ತ್ವರಿತಗತಿಯಲ್ಲಿ ಕೆಲಸ ನಿರ್ವಹಿಸಿದಾಗ ಇಂತಹ ಆರೋಪಗಳಿಂದ ಮುಕ್ತರಾಗಬಹುದು. ಚಳ್ಳಕೆರೆ ತಾಲೂಕಿನಲ್ಲಿ ಬೆಳೆ ಪರಿಹಾರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿ ರಾಜ್ಯ ಪ್ರಶಸ್ತಿಯನ್ನು ನೀಡಲಾಗಿದೆ ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಮರಣ ಹೊಂದಿದವರ ಬಗ್ಗೆ ವಿವರಗಳನ್ನು ಸರಿಯಾದ ರೀತಿಯಲ್ಲಿ ನೊಂದಣಿ ಮಾಡಿದರೆ ಚುನಾವಣಾ ಸಂದರ್ಭದಲ್ಲಿ ಅನುಕೂಲವಾಗುತ್ತದೆ. ಯಾವುದೇ ಕಡತಗಳನ್ನು ಕಳುಹಿಸಿಕೊಟ್ಟಾಗ ಕಚೇರಿಯ ಸಿಬ್ಬಂದಿಗಳು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಿದರೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ. ಹೀಗೆ ಎಲ್ಲಾ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಜಿಲ್ಲೆಗೆ ಕೀರ್ತಿ ತರುವಂತಾಗಬೇಕು ಎಂದು ತಿಳಿಸಿದರು.
ತಹಸಿಲ್ದಾರ್ ರೆಹಾನ್ ಪಾಷ ಮಾತನಾಡಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಸಿಬ್ಬಂದಿಗಳು ಉತ್ತಮ ಸೇವೆ ನೀಡುತ್ತಿದ್ದು ಎಲ್ಲರ ಸಹಕಾರದಿಂದ ಕಳೆದ ವರ್ಷ ರಾಜ್ಯ ಪ್ರಶಸ್ತಿ ಲಭಿಸಿತು. ಮುಂದೆಯೂ ಇದೇ ರೀತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುವಂತಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಕಚೇರಿಯ ಎಲ್ಲಾ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.