March 12, 2026
IMG-20260312-WA0082.jpg

ಚಳ್ಳಕೆರೆ: ಚುನಾವಣಾ ಕರ್ತವ್ಯಕ್ಕಾಗಿ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಚುನಾವಣಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುವುದೆಂದು ಚುನಾವಣಾ ನೋಡಲು ಅಧಿಕಾರಿ ರೇಷ್ಮಾ ಹಾನಗಲ್ ಎಚ್ಚರಿಸಿದರು.

ಅವರು ಬುಧವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ನಗರಮಟ್ಟದ ಮತಗಟ್ಟೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕಳೆದ ಸೆಪ್ಟೆಂಬರ್ 25ರಿಂದ ಸಮಗ್ರ ಪರಿಷ್ಕರಣೆ (ಮ್ಯಾಪಿಂಗ್) ಕಾರ್ಯ ಆರಂಭವಾಗಿದ್ದು, ಮಾರ್ಚ್ ತಿಂಗಳ ಹತ್ತು ದಿನಗಳು ಕಳೆದಿದ್ದರೂ ಸಹ ಕೆಲವು ಮತಗಟ್ಟೆ ಅಧಿಕಾರಿಗಳು ಈ ಕಾರ್ಯದ ಕುರಿತು ತುರ್ತು ಗಮನಹರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅನಗತ್ಯ ಕಾರಣಗಳನ್ನು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇದು ಚುನಾವಣಾ ಕಾರ್ಯವಾಗಿದ್ದು, ಯಾವುದೇ ಪರಿಸ್ಥಿತಿ ಬಂದರೂ ನಿಗದಿಪಡಿಸಿದ ಅವಧಿಯೊಳಗೆ ಜವಾಬ್ದಾರಿಯನ್ನು ಪೂರೈಸಬೇಕು. ಇಲ್ಲವಾದರೆ ಚುನಾವಣಾ ಆಯೋಗದಿಂದ ನೋಟಿಸ್ ಪಡೆಯುವ ಪರಿಸ್ಥಿತಿ ಎದುರಾಗಬಹುದು ಎಂದು ತಿಳಿಸಿದರು.
ಈ ಕುರಿತು ಈಗಾಗಲೇ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಾರ್ಚ್ 20ರವರೆಗೆ ಅವಕಾಶವಿದ್ದು ಉಳಿದ ಅವಧಿಯಲ್ಲಿ ಎಲ್ಲಾ ದಾಖಲಾತಿಗಳನ್ನು ಪೂರೈಸಿ ಚುನಾವಣಾ ಆಯೋಗಕ್ಕೆ ಕಳುಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಗ್ರೇಡ್-2 ಮುನಿವೆಂಕಟಪ್ಪ, ಚುನಾವಣಾ ಶಿರಸ್ತೇದಾರ್ ಹಸೀನಭಾನು, ಇಸಿಒ ಮಲ್ಲಿಕಾರ್ಜುನ್, ಸುಬ್ರಮಣ್ಯ ಶಾಸ್ತ್ರಿ, ಚುನಾವಣಾ ಶಾಖೆ ಓಬಳೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading