ಚಳ್ಳಕೆರೆ:
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿ ವ್ಯಾಪ್ತಿಯ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಳಕೆರೆ ಗ್ರಾಮಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ಗ್ರಾಮದಿಂದ ಶಾಲೆ ಹಾಗೂ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ದಿನನಿತ್ಯ ಲಗೇಜ್ ವಾಹನಗಳಲ್ಲಿ ಪ್ರಯಾಣ ಮಾಡುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ವಿಶೇಷವಾಗಿ ಹೆಣ್ಣುಮಕ್ಕಳು ಸುರಕ್ಷತಾ ಕಾರಣಗಳಿಂದ ಶಾಲೆಯನ್ನು ಮಧ್ಯದಲ್ಲೇ ಬಿಡುವಂತಹ ಘಟನೆಗಳೂ ನಡೆದಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಗ್ರಾಮಕ್ಕೆ ತಕ್ಷಣವೇ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಚೌಳಕೆರೆ ಗ್ರಾಮಸ್ಥರು ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಆಡಳೀತ ಅಧಿಕಾರಿ “ಅಫ್ರಿನ್ ಫಿರ್ದೋಸ್ ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿ ಹೇಮಾವತಿ ಅವರಿಗೆ ಮನವಿ ಸಲ್ಲಿಸಿದರು.
ಈ ಹಿನ್ನೆಲೆಯಲ್ಲಿ ಈಗಾದರೂ ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಚೌಳಕೆರೆ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸುವರೇ ಎಂಬುದನ್ನು ಗ್ರಾಮಸ್ಥರು ಕಾತರದಿಂದ ಕಾಯುತ್ತಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.