
ಚಿತ್ರದುರ್ಗಮೇ.12:
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವತಿಯಿಂದ ವಿಶ್ವ ರೆಡ್‍ಕ್ರಾಸ್ ದಿನಾಚರಣೆ ಅಂಗವಾಗಿ ಎರಡು ದಿನಗಳ ಪ್ರಥಮ ಚಿಕಿತ್ಸೆ ಮತ್ತು ವಿಪತ್ತು ನಿರ್ವಹಣಾ ತರಬೇತಿ ಕಾರ್ಯಾಗಾರ ನಡೆಯಿತು.
ರೆಡ್‍ಕ್ರಾಸ್ ಮತ್ತು ರೇಂಜರ್ಸ್ ಮತ್ತು ರೋವರ್ಸ್‍ನ ಸ್ವಯಂಸೇವಕರು ತುರ್ತು ಪರಿಸ್ಥಿತಿಯಲ್ಲಿ ಉದ್ಭವಿಸಬಹುದಾದ ಘಟನೆಗಳಿಗೆ ಮುನ್ನೆಚ್ಚರಿಕೆ ಕ್ರಮಗಳು ಕೈಗೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನ ಹಾಗೂ ಕೃತಕ ಸ್ಫೋಟಗಳು ಸಂಭವಿಸಿ ಅಣಕು ಕವಾಯತು ನಡೆಸಿದರು.
ಅನೇಕ ಜನರು ಗಾಯಗೊಂಡಾಗ ತಕ್ಷಣ ಸ್ವಯಂಸೇವಕರು ಕಾರ್ಯಪ್ರವೃತ್ತರಾಗಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಸ್ಟ್ರೇಚರ್ ಬಳಸಿ ಅವರನ್ನು ಸ್ಥಳಾಂತರಿಸಿದರು. ಸಿಪಿಆರ್ ಮತ್ತು ಬ್ಯಾಂಡೇಜಿಂಗ್ ಮಾಡಲಾಯಿತು. ತುರ್ತು ಸಮಯದಲ್ಲಿ ಜೀವ ಉಳಿಸುವ ಕ್ರಮಗಳು ಅಣಕು ಕವಾಯತು ನಡೆಸಿದರು. ರಾಷ್ಟ್ರಮಟ್ಟದ ತರಬೇತುದಾರ ಡಾ.ಕುಮಾರ್ ವಿ.ಎಲ್.ಎಸ್ ಅವರು ಅಣಕು ಪ್ರದರ್ಶನ ನಿರ್ದೇಶಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ಅಗಡಿ, ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಸಿದ್ದರಾಮ ಚೆನ್ನಗೊಂಡ, ರೆಡ್‍ಕ್ರಾಸ್ ರಾಜ್ಯ ಆಡಳಿತ ಮಂಡಳಿ ಸದಸ್ಯ ಅನಂತ ರೆಡ್ಡಿ, ಕಾರ್ಯದರ್ಶಿ ಮಜಹರ್ ಉಲ್ಲಾ, ಖಜಾಂಚಿ ವಿರೇಶ್, ನಿರ್ದೇಶಕರಾದ ಗುರುಮೂರ್ತಿ, ಶಿವರಾಮ್, ಯುವ ರೆಡ್‍ಕ್ರಾಸ್ ಸಂಯೋಜಕ ಕೃಷ್ಣಮೂರ್ತಿ, ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಇದ್ದರು.



About The Author
Discover more from JANADHWANI NEWS
Subscribe to get the latest posts sent to your email.