ಚಳ್ಳಕೆರೆ: ಭಾರತೀಯ ಸಂಸ್ಕೃತಿಯ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ವೇದ ಸಂಸ್ಥೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವತಿಯಿಂದ ಹೊಸದಾಗಿ ದಾಖಲಾದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶಿವಸ್ವಾಮಿ, ಧರ್ಮಪುರ ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವೀರಣ್ಣ ಹಾಗೂ ಹಾಸ್ಯ ಕಲಾವಿದ ಗೋಪಿಯವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಸ್ವಾಮಿ ಅವರು, ಇಂದಿನ ಸಮಾಜದಲ್ಲಿ ಮೊಬೈಲ್ ಫೋನ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ಯುವಜನರನ್ನು ತಪ್ಪು ದಾರಿಗೆ ಸೆಳೆಯುತ್ತಿದೆ. ವಿದ್ಯಾರ್ಥಿಗಳು ಇಂತಹ ಆಕರ್ಷಣೆಗಳಿಂದ ದೂರವಿದ್ದು ಶಿಕ್ಷಣದತ್ತ ಹೆಚ್ಚಿನ ಗಮನಹರಿಸಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿ.ಟಿ. ರವೀಂದ್ರ ವಹಿಸಿದ್ದರು. ಟ್ರಸ್ಟಿ ಸುವರ್ಣ, ಕಾರ್ಯದರ್ಶಿಗಳಾದ ಕಿರಣ್, ಪ್ರಸನ್ನ ಕುಮಾರ್, ಚಂದ್ರಣ್ಣ, ಪ್ರಾಂಶುಪಾಲರಾದ ಸಂದೀಪ್ ಹಾಗೂ ಸಂಸ್ಥೆಯ ಉಪನ್ಯಾಸಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

About The Author
Discover more from JANADHWANI NEWS
Subscribe to get the latest posts sent to your email.