August 12, 2026
n7230377651786539574193b709ff3696fcf3c43f9503ccdc78726ded6938715f80b1532697caa31be17a5e


ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿ ಅಂತಿಮ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದೆ. ರಾಜ್ಯಪಾಲರ ಅಂಕಿತ ಬಿದ್ದ ಬಳಿಕ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ.
ಕಳೆದ ಆಗಸ್ಟ್ 3ರಂದು 19 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರೂ, ಖಾತೆ ಹಂಚಿಕೆಯಾಗದೆ 10 ದಿನಗಳು ಕಳೆದಿದ್ದವು. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಶಾಸಕರನ್ನು ಸಮಾಧಾನಪಡಿಸುವುದು, ಜಾತಿ ಲೆಕ್ಕಾಚಾರ, ಪ್ರಾದೇಶಿಕ ಸಮತೋಲನ ಹಾಗೂ ಹೈಕಮಾಂಡ್‌ನೊಂದಿಗೆ ನಡೆದ ಸುದೀರ್ಘ ಚರ್ಚೆಗಳ ಹಿನ್ನೆಲೆಯಲ್ಲಿ ಖಾತೆ ಹಂಚಿಕೆ ವಿಳಂಬವಾಗಿತ್ತು.
ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಒಪ್ಪಿಗೆ ಪಡೆದು ಬುಧವಾರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಮುಖ ಸಚಿವರ ಖಾತೆ ಬದಲಾವಣೆ
ಈಗಾಗಲೇ ಸಂಪುಟದಲ್ಲಿದ್ದ ಕೆಲವು ಹಿರಿಯ ಸಚಿವರ ಖಾತೆಗಳಲ್ಲೂ ಪ್ರಮುಖ ಬದಲಾವಣೆ ಮಾಡಲಾಗಿದೆ.
ಕೆ.ಎಚ್. ಮುನಿಯಪ್ಪ – ಆಹಾರ ಇಲಾಖೆಯಿಂದ ಸಾಮಾಜಿಕ ಕಲ್ಯಾಣ ಇಲಾಖೆಗೆ.
ರಾಮಲಿಂಗಾರೆಡ್ಡಿ – ಜಲಸಂಪನ್ಮೂಲ ಇಲಾಖೆಯಿಂದ ಅರಣ್ಯ, ಪರಿಸರ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗೆ.
ಯು.ಟಿ. ಖಾದರ್ – ಆರೋಗ್ಯ ಇಲಾಖೆಯ ಜೊತೆಗೆ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಯ ಹೆಚ್ಚುವರಿ ಜವಾಬ್ದಾರಿ.
ನೂತನ ಸಚಿವರಿಗೆ ಹಂಚಿಕೆಯಾದ ಖಾತೆಗಳು
ಎನ್. ಚಲುವರಾಯಸ್ವಾಮಿ – ಜಲಸಂಪನ್ಮೂಲ ಇಲಾಖೆ
ಎಚ್.ಸಿ. ಬಾಲಕೃಷ್ಣ – ಪೌರಾಡಳಿತ ಇಲಾಖೆ
ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
ಬಸವಂತಪ್ಪ – ಬಂದರು ಮತ್ತು ಮೀನುಗಾರಿಕೆ ಇಲಾಖೆ
ಮಧು ಬಂಗಾರಪ್ಪ – ಪ್ರಾಥಮಿಕ ಶಿಕ್ಷಣ ಇಲಾಖೆ
ಬಸವರಾಜ ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
ಬಿ.ಝಡ್. ಜಮೀರ್ ಅಹಮದ್ ಖಾನ್ – ವಸತಿ ಇಲಾಖೆ
ಲಕ್ಷ್ಮಣ್ ಸವದಿ – ಸಹಕಾರ ಇಲಾಖೆ
ಡಾ. ಅಜಯ್ ಸಿಂಗ್ – ಸಣ್ಣ ನೀರಾವರಿ ಇಲಾಖೆ
ಎಸ್.ಎಸ್. ಮಲ್ಲಿಕಾರ್ಜುನ – ಗಣಿ ಮತ್ತು ಭೂವಿಜ್ಞಾನ ಇಲಾಖೆ
ರಿಜ್ವಾನ್ ಅರ್ಷದ್ – ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ
ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಆರ್. ಪುಟ್ಟರಂಗಶೆಟ್ಟಿ – ಪಶುಸಂಗೋಪನೆ ಇಲಾಖೆ
ಕೆ.ಎಂ. ಶಿವಲಿಂಗೇಗೌಡ – ಅಬಕಾರಿ ಇಲಾಖೆ
ವಿಜಯಾನಂದ ಕಾಶಪ್ಪನವರ್ – ಸಣ್ಣ ಕೈಗಾರಿಕೆ ಇಲಾಖೆ
ಪಿ.ಎಂ. ನರೇಂದ್ರ ಸ್ವಾಮಿ – ಕೃಷಿ ಇಲಾಖೆ
ಕೆ. ನಾಗೇಂದ್ರ – ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
ಎಸ್.ವಿ. ರಘುಮೂರ್ತಿ – ಪರಿಶಿಷ್ಟ ಪಂಗಡಗಳ (ST) ಕಲ್ಯಾಣ ಇಲಾಖೆ
ರುದ್ರಪ್ಪ ಲಮಾಣಿ – ಸಕ್ಕರೆ ಇಲಾಖೆ
ಇತರೆ ಪ್ರಮುಖ ಜವಾಬ್ದಾರಿಗಳು
ಮಂಕಾಳು ವೈದ್ಯ ಅವರಿಗೆ ವಿಧಾನಸಭೆಯ ಉಪಾಧ್ಯಕ್ಷರ ಜವಾಬ್ದಾರಿ, ಆರ್.ವಿ. ದೇಶಪಾಂಡೆ ಅವರಿಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಸ್ಥಾನ ಹಾಗೂ ಎ.ಎಸ್. ಪೊನ್ನಣ್ಣ ಅವರಿಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ನೀಡಲಾಗಿದೆ.
ರಾಜ್ಯಪಾಲರ ಅಂಕಿತದೊಂದಿಗೆ ಅಧಿಕೃತ ಗೇಜೆಟ್ ಅಧಿಸೂಚನೆ ಹೊರಬಿದ್ದ ಬಳಿಕ ನೂತನ ಸಚಿವರು ತಮ್ಮ ತಮ್ಮ ಇಲಾಖೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading