September 15, 2025
press-button-square-isolated-push-sign-177109276.jpg


ಚಿತ್ರದುರ್ಗ ನ.12:
ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಇದೇ ನವೆಂಬರ್ 27 ರವರಗೆ ವಿಸ್ತರಿಸಲಾಗಿದೆ.
ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ನೀಡುವ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾμÉ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ’ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿಸಲ್ಲಿಸಬೇಕು. ತರಬೇತಿಯ ಅವಧಿ ವೇಳೆ ಮಾಹೆಯಾನ 15,000/- ರೂ. ಗಳ ಸ್ಟೈಫೆಂಡ್ ನೀಡಲಾಗುವುದು. ತರಬೇತಿಯು 2025 ರ ಜನವರಿಯಿಂದ ಡಿಸೆಂಬರ್ ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ. ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದುರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಅರ್ಜಿ ಸಲ್ಲಿಕೆ ಅವಧಿಯನ್ನು ಇದೇ ನವೆಂಬರ್ 27 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ತುಕಾರಾಂರಾವ್ ಬಿ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading