March 17, 2026
FB_IMG_1762958096913.jpg




ಚಿತ್ರದುರ್ಗ ನ.12:
ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ತಮ್ಮ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಸುಗಮವಾಗಿ ಜನರಿಗೆ ಸ್ಪಂದಿಸುವ ಉದ್ದೇಶದಿಂದ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಆರಂಭಿಸಿರುವ ಗ್ರಾಮ-ಫೋನ್ ಉಚಿತ ಸಹಾಯವಾಣಿಗೆ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬುಧವಾರ ನಗರದ ಜಿ.ಪಂ. ಸಭಾಂಗಣದಲ್ಲಿ ಚಾಲನೆ ನೀಡಿದರು.
ಸಹಾಯವಾಣಿ ಸಂಖ್ಯೆ 1800-425-1978 ಉಚಿತ ಸೇವೆ ನ.20 ರಿಂದ ಕಾರ್ಯಾರಂಭ ಮಾಡಲಿದೆ. ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಲ್ಲಿ ಒಟ್ಟು 189 ಗ್ರಾಮ ಪಂಚಾಯಿತಿಗಳಿವೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಂದಾಜು ಒಟ್ಟು 15,04,073 ಜನರು ವಾಸವಾಗಿದ್ದಾರೆ. ಗ್ರಾಮ ಪಂಚಾಯಿತಿಗಳ ಮುಖಾಂತರ ಗ್ರಾಮೀಣ ಜನರ ಜೀವನ ಮಟ್ಟವನ್ನು ಉತ್ತಮಪಡಿಸುವ ಅನೇಕ ಜೀವನೋಪಾಯ ಹಾಗೂ ಬಡತನ ನಿರ್ಮೂಲನ ಕಾರ್ಯಕ್ರಮಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅನುμÁ್ಠನಗೊಳಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಗ್ರಾಮೀಣ ಆಡಳಿತವನ್ನು ಜನಪರ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ವತಿಯಿಂದ ಉಚಿತ ಸಹಾಯವಾಣಿ ಸಂಖ್ಯೆ 1800-425-1978 ನ. 20 ರಿಂದ ಕಾರ್ಯಾರಂಭ ಮಾಡಲಿದೆ.
ಗ್ರಾಮೀಣ ಭಾಗದ ಜನರು “ಗ್ರಾಮ ಫೋನ್” ಉಚಿತ ಸಹಾಯವಾಣಿಗೆ ಕರೆ ಮಾಡಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕುಂದು ಕೊರತೆಗಳನ್ನು ದಾಖಲಿಸಬಹುದಾಗಿದೆ. ಈ ದೂರುಗಳನ್ನು ಜಿಲ್ಲಾ ಪಂಚಾಯತ್ ಹಂತದ ಪ್ರತಿನಿಧಿ ಸ್ವೀಕರಿಸಿ, ದೂರಿನ ವಿಷಯವನ್ನು ಆಧರಿಸಿ ಸಂಬಂಧಿಸಿದ ಅಧಿಕಾರಿ ಅಥವಾ ಪ್ರತಿನಿಧಿಗೆ ಕರೆಯ ವಿವರವನ್ನು ಕುಂದು ಕೊರತೆ ನಿವಾರಿಸಲು ವರ್ಗಾಯಿಸಲಿದ್ದಾರೆ. ದೂರು ಸ್ವೀಕೃತಿಯಾಗಿರುವ ಬಗ್ಗೆ ನಾಗರೀಕರ ಮೊಬೈಲ್ ಸಂಖ್ಯೆಗೆ ಸಂದೇಶ ರವಾನೆಯಾಗಲಿದೆ. ಮುಂದಿನ ದಿನಗಳಲ್ಲಿ ವಾಟ್ಸಾಪ್ ಮೂಲಕ ಸಂದೇಶ ರವಾನಿಸಲು ಅಭಿವೃದ್ಧಿಪಡಿಸಲಾಗುವುದು. ದೂರು ಪರಿಹರಿಸುವ ಸೌಲಭ್ಯವನ್ನು ಗ್ರಾಮೀಣ ಜನತೆಗೆ ಕಲ್ಪಿಸುವ ನಿಟ್ಟಿನಲ್ಲಿ ‘ಗ್ರಾಮ-ಫೆÇೀನ್’ ಚಿತ್ರದುರ್ಗ ಜಿಲ್ಲಾ ಪಂಚಾಯತ್‍ಯ ಪ್ರಥಮ ಹೆಜ್ಜೆಯಾಗಿದೆ ಎಂದು ಜಿ.ಪಂ. ಸಿಇಓ ಡಾ.ಆಕಾಶ್ ಈ ಸಂದರ್ಭದಲ್ಲಿ ತಿಳಿಸಿದರು.
ನ.14 ರಂದು ಶಿಕ್ಷಕರ ಹಾಗೂ ಪೋಷಕರ ಮಹಾಸಭೆ :


ನ.14 ರಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪಿಯ ಕಾಲೇಜುಗಳಲ್ಲಿ ಶಿಕ್ಷಕರ ಹಾಗೂ ಪೋಷಕರ ಮಹಾಸಭೆಯನ್ನು ಆಯೋಜಿಸಲಾಗುತ್ತಿದೆ. ಗೈರು ಹಾಜರಿ, ಶಾಲೆ ಬಿಡುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡುವ ಹಾಗೂ ಫಲಿತಾಂಶಗಳನ್ನು ಹೆಚ್ಚಿಸುವ ಕುರಿತು, ಹಾಗೂ ಆಯಾ ಮಕ್ಕಳ ಕಲಿಕಾ ಪ್ರಗತಿ ಕುರಿತಂತೆ ಮಹಾಸಭೆಯಲ್ಲಿ ಮಕ್ಕಳ ಸಮ್ಮುಖದಲ್ಲಿ ಶಿಕ್ಷಕರು ಪೋಷಕರೊಂದಿಗೆ ಚರ್ಚಿಸಲಿದ್ದಾರೆ ಎಂದು ಜಿ.ಪಂ. ಸಿಇಓ ಡಾ.ಆಕಾಶ್ ಈ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ, ವಿಧಾನ ಪರಿಷತ್ ಶಾಸಕ ಕೆ.ಎಸ್. ನವೀನ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿ.ಪಂ. ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading