.ವರದಿ: ಕೆ.ಟಿ. ಓಬಳೇಶ್ ನಲಗೇತನಹಟ್ಟಿ.
ನಾಯಕನಹಟ್ಟಿ-:ಯೋಜನೆ ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಸೂರ್ಯ ಘರ್ ಯೋಜನೆಯನ್ನು ಘೋಷಿಸಿದೆ. ಇಂದು ಸಹಾಯಕ ಕಾರ್ಯನಿರ್ವಾಹಕ ಅಭಿಯತರರಾದ ಎನ್ ಜಿ ಮಮತಾ ತಿಳಿಸಿದರು.
ಬುಧವಾರ ಪಟ್ಟಣದ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವತಿಯಿಂದ ಆಯೋಜಿಸಿದ್ದ ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಕಾರ್ಯಕ್ರಮದಲ್ಲಿ ಗ್ರಾಹಕರನ್ನು ಉದ್ದೇಶಿಸಿ ಮಾತನಾಡಿದ ಅವರು.
ಸೌರಶಕ್ತಿ ಬಳಸಿ ವಿದ್ಯುತ್ ಉತ್ಪಾದಿಸುವ ಮೂಲಕ ನೈಸರ್ಗಿಕ ಸಂಪನ್ಮೂಲದ ಸದ್ಬಳಕೆ ಹಾಗೂ ವಿದ್ಯುತ್ ಉತ್ಪಾದನೆಯ ಮೇಲಿನ ಅವಲವಂಬನೆಯನ್ನು ತಗ್ಗಿಸುವುದು ಯೋಜನೆಯ ಪ್ರಮುಖ ಗುರಿಯಾಗಿದೆ. ಮನೆಯ ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಒಂದು ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಅನ್ನು ಒದಗಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ಯೋಜನೆಯಿಂದ ಮನೆಮಂದಿ ತಿಂಗಳಿಗೆ 300 ಯುನಿಟ್ ವಿದ್ಯುತ್ ಅನ್ನು ಪಡೆಯಲಿದ್ದಾರೆ. ಅಲ್ಲದೇ ಹೆಚ್ಚುವರಿ ವಿದ್ಯುತ್ ಅನ್ನು ಮಾರಾಟ ಮಾಡುವ ಮೂಲಕ ಹಣವನ್ನು ಕೂಡ ಗಳಿಸಬಹುದಾಗಿದೆ. ಫೆಬ್ರವರಿ 15, 2024 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಗೆ ಚಾಲನೆ ನೀಡಿದ್ದು, ಕೇಂದ್ರ ಸರ್ಕಾರ ಈ ಯೋಜನೆಗೆ 75,021 ಕೋಟಿ ರೂ.ಗಳ ಅನುದಾನವನ್ನು ಮೀಸಲಿಟ್ಟಿದೆ. ಕರ್ನಾಟಕದಲ್ಲೂ ಈ ಯೋಜನೆ ಈಗಾಗಲೇ ಅನುಷ್ಠಾನಗೊಂಡಿದ್ದು, ರಾಜ್ಯದ ಜನರ ಈ ಯೋಜನೆಯ ಸದುಪಯೋಗವನ್ನು ಪಡೆಯಬಹುದಾಗಿದೆ.
ನಾಯಕನಹಟ್ಟಿ ಬೆಸ್ಕಾಂ ಶಾಖೆಯ ಶಾಖಾಧಿಕಾರಿ ಎನ್.ಬಿ .ಬೋರಣ್ಣ ಮಾತನಾಡಿದರು. ಯೋಜನೆಯ ಪ್ರಮುಖ ಅಂಶಗಳು
ಮನೆಯ ಛಾವಣಿಯ ಮೇಲೆ ಸೌರ ಫಲಕ ಅಳವಡಿಕೆಗೆ ಸರ್ಕಾರದಿಂದ ಸಹಾಯಧನ
ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಕಡಿಮೆ ಬಿಡ್ಡಿಗೆ ಸಾಲ ಸೌಲಭ್ಯ ಲಭ್ಯವಿದೆ
ತಿಂಗಳಿಗೆ 300 ಯುನಿಟ್‌ನಷ್ಟು ಉಚಿತ ವಿದ್ಯುತ್ ಪಡೆಯಬಹುದಾಗಿದೆ
ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಿ ವಾರ್ಷಿಕ 17000 ರೂ.ವರೆಗೂ ಹಣ ಗಳಿಸಬಹುದು
ಈ ಯೋಜನೆಯಿಂದ ಸರ್ಕಾರಕ್ಕೆ ವಾರ್ಷಿಕ 75000 ರೂ. ವಿದ್ಯುತ್ ಉತ್ಪಾದನೆ ವೆಚ್ಚ ಉಳಿತಾಯದ ನೀರೀಕ್ಷೆ
ಸೂರ್ಯ ಘರ್ ಯೋಜನೆ ಹೇಗೆ ಕಾರ್ಯ ನಿರ್ವಹಿಸುತ್ತದೆ?
ಈ ಯೋಜನೆಯ ಅಡಿಯಲ್ಲಿ ಮನೆಯ ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲು ಸರ್ಕಾರದಿಂದ ಸಬ್ಸಿಡಿಯನ್ನು ನೀಡಲಾಗುತ್ತದೆ. ಸೌರ ಫಲಕಗಳ ಅಳವಡಿಕೆಗೆ ತಗಲುವ ವೆಚ್ಚದ ಮೇಲೆ 60% ವರೆಗೂ ಸಬ್ಸಿಡಿಯನ್ನು ನೀಡಲಾಗುತ್ತದೆ. 1 ಕಿ.ವ್ಯಾಟ್ ನಿಂದ 3 ಕಿ.ವ್ಯಾಟ್ ವರೆಗಿನ ಸೌರ ವಿದ್ಯುತ್ ಘಟಕದ ಅಳವಡಿಕೆಗೆ ಸರ್ಕಾರ ಧನ ಸಹಾಯ ನೀಡಲಿದೆ. ಅಂದರೆ, 1 ಕಿ.ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕದ ಅಳವಡಿಕೆಗೆ 30,000 ರೂ. ಸಹಾಯಧನ, 2 ಕಿ.ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕದ ಅವಳವಡಿಕೆಗೆ 60,000 ರೂ. ಸಹಾಯಧನ ಹಾಗೂ 3 ಕಿ.ವ್ಯಾಟ್ ಅಥವಾ ಹೆಚ್ಚಿನ ಸಾಮರ್ಥ್ಯದ ಸೌರ ವಿದ್ಯುತ್ ಘಟಕದ ಅವಳವಡಿಕೆಗೆ 78,000 ರೂ. ಸಹಾಯಧನ ಲಭ್ಯವಾಗಲಿದೆ. ಫಲಾನುಭವಿಗಳು ಮನೆಯ ಛಾವಣಿಯ ಮೇಲೆ ಸೌರಫಲಕಗಳನ್ನು ಅಳವಡಿಸುವ ಮೂಲಕ ತಿಂಗಳಿಗೆ 300 ಯುನಿಟ್‌ನಷ್ಟು ಉಚಿತ ವಿದ್ಯುತ್ ಅನ್ನು ಪಡೆಯಬಹುದಾಗಿದೆ. ಅಲ್ಲದೇ ಹೆಚ್ಚುವರಿ ವಿದ್ಯುತ್ ಅನ್ನು ಮಾರಾಟ ಮಾಡುವ ಮೂಲಕ ವಾರ್ಷಿಕ 17000 ರೂ. ದಿಂದ 18000 ರೂ. ನಷ್ಟು ಆದಾಯವನ್ನು ಗಳಿಸಬಹುದಾಗಿದೆ. ಎಂದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಸೈಯದ್ ಅನ್ವರ್, ಎಂ ಟಿ ಮಂಜುನಾಥ್, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಶ್ರೀಕಾಂತ್, ಮುಖ್ಯ ಅಧಿಕಾರಿ ಓ ಶ್ರೀನಿವಾಸ್, ನಾಯಕನಹಟ್ಟಿ ಬೆಸ್ಕಾಂ ಇಲಾಖೆಯ ಸಿಬ್ಬಂದಿಗಳಾದ ಜಿ. ಗೋವಿಂದಪ್ಪ, ಆರ್.ಟಿ .ರುದ್ರಮುನಿ ಶಮಿವುಲ್ಲಾ, ಸುಲ್ತಾನ್ ನದಾಫ್, ಶಿವರಾಜ್, ಎಸ್. ಓ. ದಿನೇಶ್, ಟಿ.ಆರ್. ಸೈಯದ್ ಇಮ್ರಾನ್, ಇರ್ಫಾನ್, ಮಲ್ಲಿಕಾರ್ಜುನ್, ಅಜಯ್ ಕುಮಾರ್ ,ತಿಪ್ಪೇಸ್ವಾಮಿ, ಜಗದೀಶ್, ಅಭಿಷೇಕ್, ಇದ್ದರು
About The Author
Discover more from JANADHWANI NEWS
Subscribe to get the latest posts sent to your email.