ಚಳ್ಳಕೆರೆ-13 ತಾಲ್ಲೂಕಿನ ಪರಶುರಾಮಪುರ ಹೋಬಳಿಯ ಚನ್ನಮ್ಮನಾಗತಿಹಳ್ಳಿ ಗ್ರಾಮದಲ್ಲಿ ಪಾತಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವನ್ನು ಮಾರ್ಚ್ 01 ಮತ್ತು 02 ಎರಡು ದಿನಗಳ ಕಾಲ ನಡೆಸಲಾಗುವುದು ಎಂದು ದೇವಸ್ಥಾನ ಸಮಿತಿ ಮುಖ್ಯಸ್ಥ ತಿಳಿಸಿದ್ದಾರೆ.
ಪ್ರತಿವರ್ಷದಂತೆ ಈ ವರ್ಷವೂ ಸಹ ಶ್ರೀಪಾತಲಿಂಗೇಶ್ವರ ಸ್ವಾಮಿ ಜಾತ್ರೆಯಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಬದಗಿಸುವಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸರ್ವಸಿದ್ದತೆಯನ್ನು ನಡೆಸಿದೆ. ಮಾರ್ಚ್ 1ರ ಶನಿವಾರ ಚನ್ನಮ್ಮನಾಗತಿಹಳ್ಳಿ ಗ್ರಾಮದಿಂದ ದೇವರನ್ನು ವಿವಿಧ ಕಲಾತಂಡಗಳೊAದಿಗೆ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆತರಲಾಗುವುದು, 2ರ ಭಾನುವಾರ ಬೆಳಗ್ಗೆ 5 ಗಂಟೆಗೆ ರುದ್ರಾಭಿಷೇಕ, 10ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ. ಗೊರವಿಕೆರೆ ವಂಶಸ್ಥರು ಮತ್ತು ಭಕ್ತರು ಸಕಾಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಮೆರವಣಿಗೆ ಹಾಗೂ ಪೂಜಾಕಾರ್ಯದಲ್ಲಿ ಪಾಲ್ಗೊಂಡು ಜಾತ್ರೆಯನ್ನು ಯಶಸ್ವಿಗೊಳಿಸಿಕೊಡಬೇಕೆಂದು ದೇವಸ್ಥಾನ ಆಡಳಿತ ಮಂಡಳಿ ಮನವಿ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಪರಶುರಾಮಪುರ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಆರ್.ಕಿರಣ್‌ಶಂಕರ್ ಮತ್ತು ಗೊರವಿನಕೆರೆ ವಂಶಸ್ಥರು ಹಾಗೂ ಭಕ್ತರು ಜಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ.

About The Author
Discover more from JANADHWANI NEWS
Subscribe to get the latest posts sent to your email.