ಶಿವಮೊಗ್ಗ, ಫೆಬ್ರವರಿ 12:
ಶಿವಮೊಗ್ಗ ಜಿಲ್ಲೆಯ ಅತೀ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಅಬ್ಬಲಗೆರೆ ಗ್ರಾಮ ಪಂಚಾಯಿತಿಯ ಚುನಾಯಿತ ಜನಪ್ರತಿನಿಧಿಗಳ ಐದು ವರ್ಷಗಳ ಆಡಳಿತಾವಧಿ ಫೆಬ್ರವರಿ 9ರಂದು ಪೂರ್ಣಗೊಂಡಿದೆ.
ಈ ಹಿನ್ನೆಲೆ ಸರ್ಕಾರ ಅಬ್ಬಲಗೆರೆ ಗ್ರಾಮ ಪಂಚಾಯಿತಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದು, ತಾಲೂಕು ಪಂಚಾಯಿತಿಯ ಉದ್ಯೋಗ ವಿಭಾಗದ ಸಹಾಯಕ ನಿರ್ದೇಶಕರಾದ ಸಂತೋಷ್ ಅವರನ್ನು ಆಡಳಿತಾಧಿಕಾರಿಯಾಗಿ ನಿಯೋಜಿಸಲಾಗಿದೆ.
ಸಂತೋಷ್ ಅವರು ಅಬ್ಬಲಗೆರೆ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿ ಅಧಿಕೃತವಾಗಿ ಕಾರ್ಯಭಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ರಾಜಪ್ಪ ಅವರು ನೂತನ ಆಡಳಿತಾಧಿಕಾರಿಯನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಎ ಅಕ್ಷತಾ, ಬಿಲ್ ಕಲೆಕ್ಟರ್ ಸಂದೀಪ್, ಡಿಇಓ ವಸಂತ್ ಹಾಗೂ ಅಟೆಂಡರ್‌ಗಳಾದ ಕವಿತಾ ಮತ್ತು ಗೀತಾ ಉಪಸ್ಥಿತರಿದ್ದರು.
ಮನವಿ ಅರ್ಪಣೆ:
ಕೆಎಚ್‌ಬಿ ಪ್ರೆಸ್ ಕಾಲೋನಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೂತನ ಆಡಳಿತಾಧಿಕಾರಿಗಳಿಗೆ ವಿವಿಧ ಅಭಿವೃದ್ಧಿ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಸಂಘದ ಅಧ್ಯಕ್ಷರು ಹಾಗೂ ಪತ್ರಕರ್ತರಾದ ಬಿ. ರೇಣುಕೇಶ್ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.