June 13, 2026
FB_IMG_1781362153405.jpg

ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಅಧಿನಿಯಮ–2022ರಡಿ ಪರಿಶಿಷ್ಟ ಜಾತಿಗೆ ಶೇ.17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.7ರಷ್ಟು ಹೆಚ್ಚಿಸಲಾದ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಮಹಾಸ್ವಾಮಿಗಳಾದ ಡಾ. ಪ್ರಸನ್ನಾನಂದಪುರಿ ಸ್ವಾಮಿಗಳು ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಉಚ್ಚ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಹೆಚ್ಚಿಸಲಾದ ಮೀಸಲಾತಿಯ ಅನುಷ್ಠಾನಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿರುವುದರಿಂದ, ಸರ್ಕಾರವು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂಬಂಧ ಸರ್ಕಾರದ ಪರವಾಗಿ ಹಿರಿಯ ಕಾನೂನು ತಜ್ಞ ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಿಸಿ, ಪರಿಶಿಷ್ಟ ಸಮುದಾಯಗಳ ಹಿತಾಸಕ್ತಿಯನ್ನು ನ್ಯಾಯಾಲಯದ ಮುಂದೆ ಪರಿಣಾಮಕಾರಿಯಾಗಿ ಪ್ರತಿಪಾದಿಸುವಂತೆ ಕೋರಲಾಗಿದೆ.
ಅಲ್ಲದೆ, ರಾಜ್ಯ ಸರ್ಕಾರದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವುದು ಹಾಗೂ ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿ ನೇಮಕಾತಿಗಳಲ್ಲಿ ಅರ್ಹ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ ಮನವಿ ಮಾಡಲಾಗಿದೆ.
ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಗಳನ್ನು ಸಮುದಾಯದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ಶಾಸಕರಾದ ಬಸನಗೌಡ ದದ್ದಲ್, ಡಾ. ಎನ್.ಟಿ. ಶ್ರೀನಿವಾಸ್, ಜೆ.ಎನ್. ಗಣೇಶ್, ಬಿ. ದೇವೇಂದ್ರಪ್ಪ, ನಿವೃತ್ತ ಜಿಲ್ಲಾಧಿಕಾರಿಗಳಾದ ಬಿ. ಶಿವಪ್ಪ, ಕೆ.ಎಸ್. ಮೃತ್ಯುಂಜಯ, ಮಲ್ಲೇಶಪ್ಪ ಸೇರಿದಂತೆ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading