July 13, 2026
IMG20260317113748_01

oplus_0



ಚಳ್ಳಕೆರೆ, ಜು.13: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಅಂಗವಾಗಿ ನಂ.98 ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮನೆ-ಮನೆ ಭೇಟಿ ಕಾರ್ಯ ಜೂನ್ 30ರಿಂದ ಜುಲೈ 29ರವರೆಗೆ ನಡೆಯುತ್ತಿದೆ.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 260 ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ತೆರಳಿ ಮತದಾರರ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಜುಲೈ 8ರ ವರೆಗೆ ಕ್ಷೇತ್ರದ ಒಟ್ಟು 2,25,619 ಮತದಾರರ ಪೈಕಿ 2,25,271 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಅವುಗಳಲ್ಲಿ 1,18,855 ನಮೂನೆಗಳ ಗಣಕೀಕರಣ ಕಾರ್ಯ ಪೂರ್ಣಗೊಂಡಿದೆ.
ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಇದುವರೆಗೆ 518 ಮರಣ ಪ್ರಕರಣಗಳು, 459 ಶಾಶ್ವತ ವಲಸೆ ಪ್ರಕರಣಗಳು, 183 ಡಬಲ್ ಎಂಟ್ರಿಗಳು ಹಾಗೂ 9 ಗೈರುಹಾಜರಿ ಪ್ರಕರಣಗಳು ಪತ್ತೆಯಾಗಿವೆ.
ಮತದಾರರು ತಮ್ಮ ಹೆಸರು, ವಿಳಾಸ ಸೇರಿದಂತೆ ಇತರೆ ವಿವರಗಳನ್ನು ಪರಿಶೀಲಿಸಿ, ಯಾವುದೇ ತಿದ್ದುಪಡಿ ಅಗತ್ಯವಿದ್ದಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಚುನಾವಣಾ ಸಿಬ್ಬಂದಿಗೆ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ತಾಲೂಕು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ರೇಹಾನ್ ಪಾಷ ಈ ಮಾಹಿತಿ ನೀಡಿದ್ದು, ಮತದಾರರ ಪಟ್ಟಿಯನ್ನು ಶುದ್ಧ ಹಾಗೂ ನಿಖರವಾಗಿಸಲು ಸಾರ್ವಜನಿಕರು ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಕೋರಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading