
ಚಳ್ಳಕೆರೆ: ಪ್ರೌಢಶಾಲಾ ಶಿಕ್ಷಕರು ಪರೀಕ್ಷಾ ಮಂಡಳಿ ನಿರ್ಮಿಸುತ್ತಿರುವ ಪ್ರಶ್ನೆ ಪತ್ರಿಕೆಗಳ ವಿನ್ಯಾಸದ ಹೊಸತನಕ್ಕೆ ಹೊಂದಿಕೊಂಡು ತಮ್ಮ ಬೋಧನಾ ಕೌಶಲ್ಯಗಳನ್ನು ಅಳವಡಿಸಿಕೊಂಡು ಬೋಧನೆ ಮಾಡಿ ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವಂತಾಗಬೇಕು ಎಂದು ವಿಜ್ಞಾನ ವಿಷಯ ಪರಿವೀಕ್ಷಕ ಗೋವಿಂದಪ್ಪ ಶಿಕ್ಷಕರಿಗೆ ಸಲಹೆ ನೀಡಿದರು.
ನಗರದ ಹೆಗ್ಗೆರೆ ತಾಯಮ್ಮ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ತಾಲೂಕು ಮಟ್ಟದ ಗಣಿತ ಮತ್ತು ವಿಜ್ಞಾನ ವಿಷಯಗಳ ಪ್ರೌಢಶಾಲಾ ಶಿಕ್ಷಕರಿಗೆ ಪ್ರಶ್ನೆ ಪತ್ರಿಕೆ ತಯಾರಿಕೆಯ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರು ಪ್ರಶ್ನೆ ಪತ್ರಿಕೆಯನ್ನು ತಯಾರಿಸುವ ಮುನ್ನ ವಿಷಯದ ನೀಲಿ ನಕ್ಷೆಯನ್ನು ತಯಾರಿಸಿಕೊಂಡು ವಿದ್ಯಾರ್ಥಿ ಸ್ನೇಹಿ ಹಾಗೂ ಗುಣಾತ್ಮಕತೆ ಹೊಂದಿರುವ ಪ್ರಶ್ನೆ ಪತ್ರಿಕೆಯನ್ನು ತಯಾರಿಸಿದಾಗ ಶಿಕ್ಷಕರ ಬೋಧನಾ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಆಳವನ್ನು ಅಳೆಯಲು ಸಹಕಾರಿಯಾಗುತ್ತದೆ ಕೇಂದ್ರ ಸರ್ಕಾರ ಸಿಬಿಎಸ್ ಸಿ ಪಠ್ಯಕ್ರಮದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸುವ ಶಿಕ್ಷಕರಿಗೆ ಶ್ರೇಣಿಗಳನ್ನು ನೀಡುತ್ತಿರುವುದರಿಂದ ಶಿಕ್ಷಕರು ಉತ್ತಮ ಗುಣಮಟ್ಟದ ಹಾಗೂ ಪ್ರಬುದ್ಧವಾದ ಪ್ರಶ್ನೆ ಪತ್ರಿಕೆಗಳನ್ನು ತಯಾರು ಮಾಡುತ್ತಿದ್ದಾರೆ ಇಂತಹ ಹಲವು ಬದಲಾವಣೆಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಕಾಣುತ್ತಿರುವುದರಿಂದ ಶಿಕ್ಷಕರು ಹೊಸ ಪದ್ದತಿಗಳಿಗೆ ಬದಲಾಗುವುದು ಅನಿವಾರ್ಯತೆಯಾಗಿದೆ ಶಿಕ್ಷಕರು ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಸ್ನೇಹಿಯಾದ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸುವತ್ತ ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದರು.
ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಾಜ್ ಕುಮಾರ್ ಮಾತನಾಡಿ ಪ್ರೌಢಶಾಲಾ ಶಿಕ್ಷಕರು ಒತ್ತಡದ ಕಾರ್ಯಭಾರವನ್ನು ಎದುರಿಸುತ್ತಿರುವುದರಿಂದ ಸಂಘಟನೆಗೊಳ್ಳಲು ಸಾಧ್ಯವಾಗುತ್ತಿಲ್ಲ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶ ಪಡೆಯಲೇಬೇಕು ಎಂಬ ಉದ್ದೇಶದಿಂದ ಪ್ರೌಢಶಾಲಾ ಶಿಕ್ಷಕರಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲು ಹೆಚ್ಚಿನ ಕೆಲಸ ನೀಡಲಾಗುತ್ತಿದೆ. ಇದರಿಂದಾಗಿ ಪ್ರೌಢಶಾಲಾ ಶಿಕ್ಷಕರು ಒಗ್ಗಟ್ಟು ಪ್ರದರ್ಶಿಸಲು ಸಾಧ್ಯವಾಗುತ್ತಿಲ್ಲ ಪ್ರಾಥಮಿಕ ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದರೆ ಪ್ರೌಢಶಾಲಾ ಶಿಕ್ಷಕರಿಗೆ ಬೋಧನೆ ಮಾಡಲು ಸಹಕಾರಿಯಾಗುತ್ತದೆ ಈ ನಿಟ್ಟಿನಲ್ಲಿ ಚಿಂತನೆ ನಡೆಯಬೇಕಿದೆ ಎಂದರು.
ಕಾರ್ಯಗಾರದಲ್ಲಿ ಶಿಕ್ಷಕರು ಎಸ್ ಎಸ್ ಎಲ್ ಸಿ ಪರೀಕ್ಷೆಗಾಗಿ ಪ್ರಶ್ನೆಪತ್ರಿಕೆ ತಯಾರಿಸುವ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು ಹಾಗೂ ಪ್ರಶ್ನೆ ಪತ್ರಿಕೆ ತಯಾರಿಸುವಾಗ ಉಂಟಾಗುವ ಗೊಂದಲಗಳ ಕುರಿತು ವಿಷಯ ತಜ್ಞರು ಹಾಗೂ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಚರ್ಚೆ ನಡೆಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ ಟಿ ಶ್ರೀನಿವಾಸ್ ರಾಜ್ಯ ಪರಿಷತ್ ಸದಸ್ಯ ನಾಗರಾಜ್ ಶಿಕ್ಷಣ ಸಂಯೋಜಕ ತಿಪ್ಪೇಸ್ವಾಮಿ ವಿಜ್ಞಾನ ಶಿಕ್ಷಣ ಕ್ಲಬ್ ಬಸವರಾಜ್ ಸಂಪನ್ಮೂಲ ವ್ಯಕ್ತಿ ವೀರಣ್ಣ ಸೇರಿದಂತೆ ವಿವಿಧ ಶಾಲೆಗಳ ಗಣಿತ ಮತ್ತು ವಿಜ್ಞಾನ ವಿಷಯಗಳ ಶಿಕ್ಷಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.