ಚಳ್ಳಕೆರೆ: ರಾಷ್ಟ್ರದ ಸಂಸ್ಕೃತಿಯನ್ನು ಪ್ರಪಂಚಕ್ಕೆ ವಿಸ್ತರಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಯುವ ಜನರಲ್ಲಿ ದೇಶ ಕಟ್ಟುವ ಶಕ್ತಿ ಇದೆ ಎಂದು ನಂಬಿದವರು ಶ್ರೀ ಸ್ವಾಮಿ ವಿವೇಕಾನಂದರು ಮಾತ್ರ ಎಂದು ನಗರದ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಎಚ್ಆರ್ ಹೇಮ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಕೀಲರ ಸಂಘ ಕಾನೂನು ಸಲಹಾ ಸಮಿತಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಡವರು ಹಾಗೂ ಶೋಷಿತರು ಶೋಷಣೆಗೆ ಒಳಗಾದಾಗ ನ್ಯಾಯ ಒದಗಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರ ಮುಂದಾಗಿದೆ ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳುವುದು ಅಗತ್ಯ ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸುವುದು ಸರ್ಕಾರದ ಕಾರ್ಯಕ್ರಮಗಳಲ್ಲಿ ಒಂದಾಗಿದ್ದು ಯುವಜನತೆ ಪೋಸ್ಕೋ ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು ಮಹಿಳೆಯರು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯಬೇಕು ಮೂಲಭೂತ ಕಾನೂನಾತ್ಮಕ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ವಿದ್ಯಾರ್ಥಿ ವೃಂದಕ್ಕೆ ಅಗತ್ಯವಾಗಿದ್ದು ತಮ್ಮ ಸುತ್ತಮುತ್ತಲಿನ ಸಮಾಜದ ಜನರಿಗೆ ಅರಿವು ಮೂಡಿಸುವ ಕಾರ್ಯ ಯುವಶಕ್ತಿಯಿಂದ ನಡೆಯಬೇಕಿದೆ ಎಂದು ತಿಳಿಸಿದರು.

ವಕೀಲರಾದ ವಿಶ್ವನಾಥ್ ಮಾತನಾಡಿ ಯುವಕರು ಭಾರತದ ಆಸ್ತಿಯಾಗಿದ್ದು ಯುವಕರಿಂದಲೇ ಸದೃಢ ಭಾರತ ನಿರ್ಮಾಣ ಸಾಧ್ಯ ಎಂಬುದು ವಿವೇಕಾನಂದರ ನಂಬಿಕೆಯಾಗಿತ್ತು ಯುವಕರಿಗೆ ಆಂತರಿಕ ಶಕ್ತಿ ಸ್ಪೂರ್ತಿ ತುಂಬಿ ದೇಶದ ಪ್ರಬುದ್ಧತೆಗೆ ದುಡಿಯುವಂತೆ ಮಾಡಿದ್ದು ಸ್ವಾಮಿ ವಿವೇಕಾನಂದರಾಗಿದ್ದರು ವಿವೇಕಾನಂದರ ಘೋಷ ವಾಕ್ಯಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಂಡು ಅದನ್ನು ಕರ್ತವ್ಯ ರೂಪದಲ್ಲಿ ಪ್ರದರ್ಶಿಸಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ತಿಳಿಸಿದರು
ಪ್ರಾಂಶುಪಾಲ ಕೆ ತಿಮ್ಮಯ್ಯ ಮಾತನಾಡಿ ಯುವ ಜನತೆ ದೇಶದ ಆಸ್ತಿಯಾಗಿದ್ದು ವಿದ್ಯಾರ್ಥಿಗಳು ವಿವೇಕಾನಂದರ ಚರಿತ್ರೆ ನೀತಿ ಪಾಠ ಹಾಗೂ ಸಂದೇಶಗಳನ್ನು ತಿಳಿದುಕೊಳ್ಳುವ ಮೂಲಕ ಸನ್ಮಾರ್ಗದಲ್ಲಿ ನಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಎನ್ಎಸ್ಎಸ್ ಘಟಕದ ಅಧಿಕಾರಿ ಶಾಂತಕುಮಾರಿ ಉಪನ್ಯಾಸಕರಾದ ಹಭೀಬ್ ಉಲ್ಲಾ ವಕೀಲರಾದ ಸಿದ್ದರಾಜು ಪಾಲಯ್ಯ ರುದ್ರಯ್ಯ ಪ್ರಭಾಕರ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.