February 14, 2026
FB_IMG_1771034792745.jpg

ಚಳ್ಳಕೆರೆ: ನಗರದ ಶ್ರೀ ವೆಂಕಟಸಾಯಿ ಸೇವಾ ಟ್ರಸ್ಟ್ ವತಿಯಿಂದ 9ನೇ ವರ್ಷದ ವಾರ್ಷಿಕೋತ್ಸವ ಹಾಗೂ “ಮಹಾ ಶಿವರಾತ್ರಿ ಮಹೋತ್ಸವ” ಕಾರ್ಯಕ್ರಮವನ್ನು ಭಾನುವಾರ ದಿನಾಂಕ 15-02-2026 ರಂದು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ.

ಈ ಪ್ರಯುಕ್ತ ಶ್ರೀ ಸಾಯಿ ಮಂದಿರ ನಲ್ಲಿ ವಿಶೇಷ ಅಭಿಷೇಕ, ಪೂಜಾ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸಂಜೆ 6 ಗಂಟೆಯಿಂದ ಗಾಯಕ ಶ್ರೀ ಮುತ್ತುರಾಜ್ ಹಾಗೂ ಸಂಗಡಿಗರಿಂದ ಭಕ್ತಿಗೀತೆಗಳ ಗಾಯನ ನಡೆಯಲಿದ್ದು, ವಿವಿಧ ಭಜನಾ ತಂಡಗಳಿಂದ ರಾತ್ರಿ 12 ಗಂಟೆಯವರೆಗೆ ನಿರಂತರ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಿಶೇಷ ಸೂಚನೆ: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಸಾಯಿ ಬಾಬಾ ರವರ ರುದ್ರಾಕ್ಷ ವಸ್ತ್ರ ಅಲಂಕೃತ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ.
ಭಕ್ತರ ಅನುಕೂಲಕ್ಕಾಗಿ ಬೆಳಗ್ಗೆ 9 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಿರಂತರ ಪ್ರಸಾದ ವಿನಿಯೋಗ ಇರಲಿದೆ.
ಸಾಯಿ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಟ್ರಸ್ಟ್ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ವಿನಂತಿಸಿದ್ದಾರೆ

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading