February 14, 2026
IMG-20260214-WA0195.jpg

ನಾಯಕನಹಟ್ಟಿ: ಪಟ್ಟಣದಲ್ಲಿ ಸುಮಾರು 25 ರಿಂದ 30 ಸಾವಿರ ಜನಸಂಖ್ಯೆ ಇರುವ ಹಿನ್ನೆಲೆಯಲ್ಲಿ ಕ್ರೀಡಾಪಟುಗಳ ಹಿತದೃಷ್ಟಿಯಿಂದ ಕ್ರೀಡಾಂಗಣಕ್ಕೆ ಮೀಸಲಿಟ್ಟಿರುವ 3 ಎಕರೆ ಜಾಗದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವಂತೆ ನಾಯಕನಹಟ್ಟಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಟಿ ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕ್ಲಬ್ಬಿನ ದೈಹಿಕ ಶಿಕ್ಷಣ ನಿರ್ದೇಶಕ ಹಫೀಜ್ ಹಾಗೂ ಕ್ರೀಡಾಪಟುಗಳು ಮನವಿ ಸಲ್ಲಿಸಿ ಮಾತನಾಡಿ, ಪಟ್ಟಣದ ಅನೇಕ ಕ್ರೀಡಾಪಟುಗಳು ಪ್ರತಿದಿನ ಮುಂಜಾನೆ ಹಾಗೂ ಸಂಜೆ ವೇಳೆ ಪಟ್ಟಣದ ಹೊರ ಪ್ರದೇಶಗಳಲ್ಲಿ ಮತ್ತು ಶಾಲಾ ಆವರಣಗಳಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಸೌಲಭ್ಯಗಳ ಕೊರತೆಯ ನಡುವೆಯೂ ಹಲವರು ರಾಜ್ಯ, ರಾಷ್ಟ್ರ ಹಾಗೂ ವಿಶ್ವವಿದ್ಯಾಲಯ ಮಟ್ಟದಲ್ಲಿ ಸಾಧನೆ ಮಾಡಿರುವುದಾಗಿ ತಿಳಿಸಿದರು.
ಪಟ್ಟಣ ಪಂಚಾಯಿತಿಯಿಂದ ಮೀಸಲಿರುವ 3 ಎಕರೆ ಜಾಗದಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ಕ್ರೀಡಾಂಗಣ ನಿರ್ಮಿಸಿದರೆ ಸ್ಥಳೀಯ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿದ್ದು, ಇನ್ನಷ್ಟು ಪ್ರತಿಭೆಗಳು ಹೊರಹೊಮ್ಮಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬಹುದು ಎಂದು ಅಭಿಪ್ರಾಯಪಟ್ಟರು.
ಸುಸಜ್ಜಿತ ಕ್ರೀಡಾಂಗಣ ನಿರ್ಮಾಣದಿಂದ ಪಟ್ಟಣದ ಯುವಕರಿಗೆ, ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಆರೋಗ್ಯಕರ ವಾತಾವರಣದಲ್ಲಿ ಕ್ರೀಡಾಭ್ಯಾಸ ಮಾಡಲು ಅನುಕೂಲವಾಗಲಿದೆ ಎಂದು ಮನವಿಯಲ್ಲಿ ಒತ್ತಿಹೇಳಲಾಗಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading