December 14, 2025
IMG-20250314-WA0147.jpg


ನಾಯಕನಹಟ್ಟಿ:: ಶಿಕ್ಷಣಕ್ಕೆ ಬಡತನ ಸಿರಿತನ ತಾರತಮ್ಯವಿಲ್ಲ ಪರಿಶ್ರಮ ಮತ್ತು ಸತತ ಪ್ರಯತ್ನದಿಂದ ಮಾತ್ರ ಸಾಧ್ಯ ಎಂದು ಎಸ್ ಬಿ ಎಂ ಸಿ ಅಧ್ಯಕ್ಷ ಓ ದಾಸಯ್ಯ ಹೇಳಿದ್ದಾರೆ.

ಶುಕ್ರವಾರ ಹೋಬಳಿಯ ಗಜ್ಜುಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಶಾರದಾ ಪೂಜೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ .ಮಾತನಾಡಿದ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರತಿಯೊಬ್ಬರು ಪ್ರೋತ್ಸಾಹ ನೀಡಬೇಕು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಕರೊಂದಿಗೆ ಪೋಷಕರು ಸಹಕಾರ ಅಗತ್ಯವಾಗಿದೆ ಪೋಷಕರು ತಮ್ಮ ಸಂಕಷ್ಟದ ಜೀವನದ ನಡುವೆ ಮಕ್ಕಳಿಗೆ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು.
ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿ ತರುವ ಹಾಗೆ ಶಿಕ್ಷಣವನ್ನು ಪಡೆಯಬೇಕು ಎಂದರು.

ಇದೇ ಸಂದರ್ಭದಲ್ಲಿ
ಗಜ್ಜುಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಈ.ಬಿ. ಬೋಮ್ಮಲಿಂಗಯ್ಯ,
ಸಹ ಶಿಕ್ಷಕರಾದ ಎಂ. ಆರ್. ಸ್ವಾಮಿನಾಥ್, ಜಿ. ಓ. ನಾಗರಾಜ್, ಕೆ.ಓ. ಪೆನ್ನೂಬಳಿ, ಡಿ. ಸಿ. ಪಾಟೀಲ್, ಸೇರಿದಂತೆ ಶಾಲೆಯ ವಿದ್ಯಾರ್ಥಿನಿಯರು ಗ್ರಾಮಸ್ಥರು ಉಪಸ್ಥಿತರಿದ್ದರು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading