ಚಳ್ಳಕೆರೆ: ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶ್ರೀ ಯೋಗಿ ನಾರೇಯಣರ 299ನೇ ಜಯಂತಿ ಕಾರ್ಯಕ್ರಮವನ್ನು ತಾಲೂಕು ಆಡಳಿತದ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಆಯೋಜನೆ ಮಾಡಲಾಗಿತ್ತು.



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್ ರೆಹಾನ್ ಪಾಷಾ ಯೋಗಿ ನಾರಾಯಣೆರವರು ಸಮಾಜದಲ್ಲಿನ ಅನಿಷ್ಠ ಪದ್ಧತಿಗಳ ಬಗ್ಗೆ ಹೋಗಲಾಡಿಸಲು ನಿರಂತರವಾಗಿ ಜನಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದ್ದರು ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳುವ ಮೂಲಕ ದಾರ್ಶನಿಕರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು ಎಂದರು.
ಬಲಿಜ ಸಮುದಾಯದ ಮುಖಂಡ ಬಿ ಸಿ ಸಂಜೀವ ಮೂರ್ತಿ ಮಾತನಾಡಿ ಯೋಗಿ ನಾರಾಯಣರವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ ಅವರು ಎಲ್ಲ ಸಮುದಾಯದವರನ್ನು ಸಮಾನವಾಗಿ ಕಂಡವರು ಅವರ ಕಾಲಜ್ಞಾನದ ತತ್ವ ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಬಲಿಜ ಸಮುದಾಯವು ಒಗ್ಗಟ್ಟಾಗಿ ಮುನ್ನಡೆಯಬೇಕಿದೆ ಆಗ ಮಾತ್ರ ನಮ್ಮ ಗುರಿಗಳನ್ನು ತಲುಪಲು ಸಾಧ್ಯ ಎಂದು ಕರೆ ನೀಡಿದರು.



ಈ ಸಂದರ್ಭದಲ್ಲಿ ಬಲಿಜ ಸಮಾಜದ ಅಧ್ಯಕ್ಷ ವೆಂಕಟೇಶ್.ಬಿ ವಿ ಚಿದಾನಂದ, ನಿರಂಜನಮೂರ್ತಿ ಲಕ್ಷ್ಮಣ ಲ್ಯಾಬ್.ವೆಂಕಟೇಶ್.ಬಿಕೆ. ನಾಗರಾಜ್ ಬಿಕೆ ರಾಜು, ರಾಘವೇಂದ್ರ ಬಿ.ಸುರೇಶ್ ಬಾಬು ಹಾಗೂ ಬಲಿಜ ಸಮಾಜದ ಮುಖಂಡರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.