ನಾಯಕನಹಟ್ಟಿ:
ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿದ್ಯಾರ್ಥಿಗಳು ವಿಜ್ಞಾನಿ ಸಿ.ವಿ. ರಾಮನ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಲ್ಲೂರಹಳ್ಳಿ ಶ್ರೀ ಮೂಗಬಸವೇಶ್ವರ ಹೈಟೆಕ್ ಶಾಲೆಯ ಕಾರ್ಯದರ್ಶಿ ಕೆ.ಆರ್. ತಿಪ್ಪೇಸ್ವಾಮಿ ಹೇಳಿದರು.
ನಾಯಕನಹಟ್ಟಿ ಸಮೀಪದ ಮಲ್ಲೂರಹಳ್ಳಿ ಗ್ರಾಮದಲ್ಲಿರುವ ಶ್ರೀ ಮೂಗಬಸವೇಶ್ವರ ಹೈಟೆಕ್ ಶಾಲಾ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಜ್ಞಾನಿ ಸಿ.ವಿ. ರಾಮನ್ ಅವರಿಗೆ ವಿಜ್ಞಾನದಲ್ಲಿ ಅಪಾರ ಆಸಕ್ತಿ ಇದ್ದುದರಿಂದ ಹೆಚ್ಚಿನ ವೇತನದ ಉದ್ಯೋಗವನ್ನು ತ್ಯಜಿಸಿ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡುವ ಸಂಕಲ್ಪದೊಂದಿಗೆ ಹಗಲು-ರಾತ್ರಿ ಪರಿಶ್ರಮಪಟ್ಟರು. ಅದರ ಫಲವಾಗಿ ಬೆಳಕಿನ ಚದುರುವಿಕೆ ಕುರಿತು ಮಹತ್ವದ ಸಂಶೋಧನೆ ನಡೆಸಿ ನೊಬೆಲ್ ಪ್ರಶಸ್ತಿ ಪಡೆದರು. ಅವರ ಜೀವನ ಹಾಗೂ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಕೆ. ಜ್ಯೋತಿ, ಶಿಕ್ಷಕರಾದ ಗೀತಾ, ಎಚ್.ವಿ. ಶಿಲ್ಪ, ಜಿ.ಪಿ. ಪಾಲಾಕ್ಷ, ವಿಜಯಲಕ್ಷ್ಮಿ, ಕೆ.ಒ. ಚಂದನ, ಓ. ಸುಚಿತ್ರ, ಗ್ರಾಮಸ್ಥರು ಹಾಗೂ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.