April 14, 2026
IMG-20260414-WA0129.jpg

ನಾಯಕನಹಟ್ಟಿ-: ಭಾರತದ ಪ್ರತಿಯೊಬ್ಬ ಪ್ರಜೆಗೂ ಜೀವಿಸುವ ಹಕ್ಕನ್ನು ನೀಡಿದ್ದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರು ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷ ಮಂಜುಳ ಶ್ರೀಕಾಂತ್ ಹೇಳಿದರು.

ಮಂಗಳವಾರ ಪಟ್ಟಣದ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು ಸಮ ಸಮಾಜದ ನಿರ್ಮಾಣಕ್ಕೆ ದೇಶ ವಿದೇಶಗಳನ್ನು ಸುತ್ತಿ ಇಡೀ ವಿಶ್ವವೇ ಮೆಚ್ಚುವಂತ ಸಂವಿಧಾನವನ್ನು ನೀಡಿದ್ದಾರೆ ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಿ ಎಂದು ಕರೆ ನೀಡಿದರು.ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯ ಸೈಯದ್ ಅನ್ವರ್ ಮಾತನಾಡಿದರು ಅಂಬೇಡ್ಕರ್ ತಮ್ಮ ಜೀವನದಲ್ಲಿ ಪಟ್ಟ ಕಷ್ಟಗಳಿಂದ ಶಿಕ್ಷಣ ಸಂಘಟನೆ ಮತ್ತು ಹೋರಾಟದ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂಬ ಕನಸು ಕಂಡಿದ್ದರು ಅವರು ನೀಡಿದ ಸಂವಿಧಾನದ ಫಲವಾಗಿ ತಳ ಸಮುದಾಯಗಳಿಗೆ ಸೌಲಭ್ಯ ದೊರೆಯುವಂತೆ ಆಗಿದೆ ಎಂದರು.ಪಟ್ಟಣ ಪಂಚಾಯತಿ ಸದಸ್ಯರಾದ ಎಂ.ಟಿ. ಮಂಜುನಾಥ್, ಟಿ. ಮಹೇಶ್ವರಿ. ಸುನೀತಾ ಮುದಿಯಪ್ಪ, ಸರ್ವಮಂಗಳ ಉಮಾಪತಿ, ಬಿ. ವಿನೂತಾ, ಹಾಗೂ ನಾಮನಿರ್ದೇಶನ ಸದಸ್ಯರಾದ ಓಬಳೇಶ್. ಮಹಾಂತಮ್ಮ,ಮತ್ತು ಮುಖ್ಯಾಧಿಕಾರಿ ಓ. ಶ್ರೀ ಶ್ರೀನಿವಾಸ್, ಸೇರಿದಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading